Breaking News
Home / Uncategorized / ಶಾಸಕರ ಸೀಕ್ರೆಟ್ ಮೀಟಿಂಗ್ ಬಗ್ಗೆ ರೇಣುಕಾಚಾರ್ಯ ಹೇಳಿದ್ದೇನು ..? …

ಶಾಸಕರ ಸೀಕ್ರೆಟ್ ಮೀಟಿಂಗ್ ಬಗ್ಗೆ ರೇಣುಕಾಚಾರ್ಯ ಹೇಳಿದ್ದೇನು ..? …

Spread the love

ಬೆಂಗಳೂರು, ಮೇ 29- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವದ ಬಗ್ಗೆ ನಮಗೆಲ್ಲರಿಗೂ ವಿಶ್ವಾಸವಿದ್ದು , ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಎದುರಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪನವರು ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸುತ್ತಿದ್ದಾರೆ. ಅವರ ನಾಯಕತ್ವದ ಬಗ್ಗೆಯಾಗಲೀ ಇಲ್ಲವೆ ಆಡಳಿತದ ಬಗ್ಗೆಯಾಗಲೀ ಯಾರಿಗೂ ಕೂಡಾ ಎಳ್ಳಷ್ಟು ಅನುಮಾನವಿಲ್ಲ. ಸಣ್ಣ ಪುಟ್ಟ ಗೊಂದಲಗಳಿದ್ದರೆ ಅದನ್ನು ಪರಿಹರಿಸಲು ಪಕ್ಷದ ಪ್ರಮುಖರು ಮುಂದಾಗಲಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ರಾಜ್ಯದಲ್ಲಿ ಕೊರೊನಾ ಸಮಸ್ಯೆ ಇದೆ. ಇಂತಹ ಸಂದರ್ಭದಲ್ಲಿ ಯಾರೊಬ್ಬರೂ ಕೂಡಾ ರಾಜಕಾರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಯಡಿಯೂರಪ್ಪನವರು ಕೊರೊನಾ ಬಿಕ್ಕಟ್ಟನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಎಲ್ಲಾ ಶಾಸಕರು ಅವರ ಬೆಂಬಲಕ್ಕೆ ಇದ್ದಾರೆ.

ನಮ್ಮ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಕೊರೊನಾ ನಿಯಂತ್ರಣ ಮಾಡುವಲ್ಲಿ ಯಡಿಯೂರಪ್ಪನವರಿಗೆ ಕೇಂದ್ರ ವರಿಷ್ಠರು ಶಬ್ಬಾಸ್‍ಗಿರಿ ಕೊಟ್ಟಿದ್ದಾರೆ.

ಹಗಲು ರಾತ್ರಿ ಎನ್ನದೆ ಇದನ್ನು ಸರ್ಮಪಕವಾಗಿ ನಿಭಾಯಿಸಿದ್ದಾರೆ. ಅವರ ಕುರ್ಚಿ ಇನ್ನೂ ಗಟ್ಟಿಯಾಗಿದೆ. ಎಲ್ಲಾ ಶಾಸಕರ ಬೆಂಬಲ ಇರುವುದರಿಂದ ಅವರ ನಾಯಕತ್ವದ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು

ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಸರ್ಕಾರದಲ್ಲಿ ಹಸ್ತಕ್ಷೇಪ ನಡೆಸಿಲ್ಲ. ಅವರು ಯಾವುದೇ ವಿಷಯದಲ್ಲಿ ಹಸ್ತಕ್ಷೇಪ ಮಾಡಿದ್ದರೆ ಸಾಕ್ಷಿ ಕೊಡಲಿ ಎಂದು ಸವಾಲು ಹಾಕಿದರು.

ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸುವುದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಏನೇ ಸಮಸ್ಯೆ ಇದ್ದರೂ ಪಕ್ಷದ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು. ಈ ರೀತಿ ಸಭೆ ನಡೆಸುವುದರಿಂದ ಶೋಭೆ ತರುವುದಿಲ್ಲ ಎಂದು ರೇಣುಕಾಚಾರ್ಯ ಹೇಳಿದರು.

ಸಂತೋಷ್ ಅವರರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಮಾಧ್ಯಮಗಳಿಂದ ತಿಳಿದಿದ್ದೇನೆ. ಈಗ ಅದನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಹೈಕಮಾಂಡ್ ಬಲಿಷ್ಠವಾಗಿರುವುದರಿಂದ ಏನೇ ಸಮಸ್ಯೆ ಇದ್ದರೂ ಶೀಘ್ರದಲ್ಲಿ ಇತ್ಯರ್ಥ ಪಡಿಸಲಿದ್ದಾರೆ ಎಂದು ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಗುದದ್ವಾರಕ್ಕೆ ಏರ್‌ಬಿಟ್ಟು ಯುವಕ ದುರ್ಮರಣ!

Spread the loveಬೆಂಗಳೂರು: ಇಬ್ಬರು ಸ್ನೇಹಿತರು ತಮಾಷೆ ಮಾಡುವ ಬರದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾಹನ ಸರ್ವೀಸ್‌ ಸೆಂಟರ್‌ನಲ್ಲಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ