ಬೆಂಗಳೂರು: ವಲಸೆ ಮತ್ತು ಕೂಲಿ ಕಾರ್ಮಿಕರ ಸ್ಥಳಾಂತರಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.
ಕೆಎಸ್‍ಆರ್ ಟಿಸಿ ಬಸ್ ಗಳ ಮೂಲಕ ಕಾರ್ಮಿಕರನ್ನು ಸ್ಥಳಾಂತರ ಮಾಡಬಹುದಾಗಿದೆ. ಸ್ಥಳಾಂತರ ಮಾಡುವಾದ ಶೇ.40ರಷ್ಟು ಜನರನ್ನು ಮಾತ್ರ ಬಸ್ ನಲ್ಲಿ ಕರೆದುಕೊಂಡ ಹೋಗವುದರ ಜೊತೆಗೆ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾರ್ಮಿಕರನ್ನು ಹೊರ ರಾಜ್ಯಗಳಿಗೆ ಸ್ಥಳಾಂತರ ಮಾಡುವಂತಿಲ್ಲ. ರಾಜ್ಯದ ಜಿಲ್ಲೆಗಳಲ್ಲಿ ಮಾತ್ರ ಸ್ಥಳಾಂತರ ಅವಕಾಶ ನೀಡಲಾಗಿದೆ. ಕೂಲಿ ಕಾರ್ಮಿಕರನ್ನು ತಮ್ಮ ತಮ್ಮ ಗ್ರಾಮಗಳಿಗೆ ಮತ್ತು ಕಾಮಗಾರಿ ನಡೆಯುವ ಸ್ಥಳಗಳಿಗೆ ಶಿಫ್ಟ್ ಮಾಡಬಹುದು. ಸರ್ಕಾರ ಈಗಾಗಲೇ ಗುರುತಿಸಿರುವ ಕೊರೊನಾ ಕೆಂಪು ವಲಯಗಳಿಗೆ ಕಳುಹಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಖಡಕ್ ಆಗಿ ಸೂಚಿಸಿದೆ.