ಬೆಂಗಳೂರು, ಮೇ 30- ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ 30 ಜಿಲ್ಲೆಗಳಲ್ಲಿ ಜಗಿಯುವ ತಂಬಾಕು ಪಾನ್ ಮಸಾಲ ಉತ್ಪನ್ನಗಳನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಮಾತನಾಡಿ, ಇಂದು ವಿಶ್ವ ತಂಬಾಕು ದಿನವಾಗಿದ್ದು, ಇದರ ಅಂಗವಾಗಿ ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ ತಂಬಾಕು ಜಗಿದು ಉಗಿಯುವುದರಿಂದ ಸೋಂಕು ಹರಡುವ ಸಂಭವ ಹೆಚ್ಚಿದೆ. ಹೀಗಾಗಿ ತಂಬಾಕಿನ ಸಂಬಂಧಪಟ್ಟಂತೆ ಎಲ್ಲಾ ಉತ್ಪನ್ನಗಳನ್ನು ನಿಷೇಸಲಾಗಿದೆ ಎಂದರು.
ಇಂದಿನಿಂದ ಸಾರ್ವಜನಿಕ ಸ್ಥಳದಲ್ಲಿ ತಂಬಾಕನ್ನು ಜಗಿದು ಉಗಿಯುವವರ ವಿರುದ್ಧ ಐಪಿಸಿ ಸೆಕ್ಷನ್ 188, 268, 269, 270 ಕಾನೂನಿನ ಅಡಿ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ಹೇಳಿದರು.
ಪೆÇಲೀಸ್ ಇಲಾಖೆ, ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಈ ಕಾನೂನನ್ನು ಜಾರಿಗೊಳಿಸಲಿವೆ ಎಂದರು.2016ರಲ್ಲಿ ಉತ್ಪಾದನೆ ಮತ್ತು ಮಾರಾಟವನ್ನು ಕೇಂದ್ರ ಸರ್ಕಾರ ನಿಷೇಸಿತ್ತು.
ಆದರೆ, ನ್ಯಾಯಾಲಯದಲ್ಲಿ ತಡೆಯಾಜ್ಞೆಗಳಿವೆ. ಅಂತಿಮ ತೀರ್ಪು ಪ್ರಕಟಗೊಂಡಿಲ್ಲ. ಹಾಗಾಗಿ ಕೋವಿಡ್ ಸಂದರ್ಭವನ್ನು ಸದ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರ ಸಂಪೂರ್ಣ ನಿಷೇಧ ಮಾಡಿದೆ ಎಂದು ಶ್ರೀರಾಮುಲು ಹೇಳಿದರು.