ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಮಹಾಮಾರಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಮಧ್ಯೆ ರಾಜಕೀಯದಲ್ಲಿ ಆಪರೇಷನ್ ಕಮಲ ಕೂಡ ಚುರುಕುಕೊಂಡಿದ್ದು, ಕಾಂಗ್ರೆಸ್ ಮುಖಂಡರೊಬ್ಬರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಟಿ.ದಾಸರಹಳ್ಳಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಬಿಬಿಎಂಪಿ ಸದಸ್ಯೆಯ ಪತಿ ಹಾಗೂ ಕಾಂಗ್ರೆಸ್ ಮುಖಂಡರಾಗಿದ್ದ ತಿಮ್ಮನಂಜಯ್ಯ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.
ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಮಾಜಿ ಬಿಜೆಪಿ ಶಾಸಕ ಎಸ್.ಮುನಿರಾಜು ಕೊರೊನಾ ವೈರಸ್ ಲಾಕ್‍ಡೌನ್ ನಡುವೆ ತಮ್ಮ ಕ್ಷೇತ್ರದಲ್ಲಿ ಹಸಿದವರಿಗೆ ಊಟ, ದಿನಸಿ, ತರಕಾರಿ ನೀಡಿ ಜನರಿಗೆ ನೆರವಾಗಿದ್ದರು. ಈ ನಡುವೆ ಕ್ಷೇತ್ರದಲ್ಲಿ ತಮ್ಮ ಅಸ್ತಿತ್ವಕ್ಕೆ ಟಿ.ದಾಸರಹಳ್ಳಿಯಲ್ಲಿ ಆಪರೇಷನ್ ಕಮಲ ಚುರುಕುಗೊಂಡಿದ್ದು, ತಿಮ್ಮನಂಜಯ್ಯ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಪೀಣ್ಯ ಕೈಗಾರಿಕಾ ಪ್ರದೇಶ ವಾರ್ಡ್ ಕಾಂಗ್ರೆಸ್ ಪಕ್ಷದ ಸದಸ್ಯೆ ಲಲಿತಾ ಅಧಿಕಾರದಲ್ಲಿದ್ದು, ಪತಿ ತಿಮ್ಮನಂಜಯ್ಯ ಸೇರ್ಪಡೆ ಮೂಲಕ ಟಿ.ದಾಸರಹಳ್ಳಿ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಮುನಿರಾಜು ಕಾಂಗ್ರೆಸ್-ಜೆಡಿಎಸ್ ಪಕ್ಷಕ್ಕೆ ಶಾಕ್ ನೀಡಿದ್ದಾರೆ.
ಕೊರೊನಾ ನಡುವೆ ಸಾಮಾಜಿಕ ಅಂತರ ಕಾಯ್ದುಕೊಂಡು ಟಿ.ದಾಸರಹಳ್ಳಿಯ ಬಾಗಲಗುಂಟೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಸಲಾಗಿದೆ. ಈ ವೇಳೆ ಮಾಜಿ ಶಾಸಕ ಎಸ್.ಮುನಿರಾಜು, ಕ್ಷೇತ್ರದ ಅಧ್ಯಕ್ಷ ಲೋಕೇಶ್, ತಿಮ್ಮನಂಜಯ್ಯ, ಮುಖಂಡರಾದ ನರಸಿಂಹ ಮೂರ್ತಿ, ಸಿಎಂ. ನಾಗರಾಜು, ಉಮಾದೇವಿ, ಇನ್ನಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.
https://youtu.be/OYEMtBeW6b0