ಬೆಂಗಳೂರು: ನೈಟ್ ಕರ್ಫ್ಯೂ ಸಡಿಲ ಮಾಡಿದ ಹಿನ್ನೆಲೆಯಲ್ಲಿ ಇಂದಿನಿಂದ ಬಿಎಂಟಿಸಿ ಬಸ್ ಸಂಚಾರದ ಅವಧಿಯಲ್ಲಿ ಬದಲಾವಣೆಯಾಗಿದೆ.
ಇದುವರೆಗೂ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಮಾತ್ರ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶ ಇತ್ತು. ಇಂದಿನಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಬಿಎಂಟಿಸಿ ಬಸ್‍ಗಳು ಓಟಾಟ ಮಾಡಲಿವೆ. ಈ ಹಿಂದೆಯೇ ಎಂಡಿ ಶಿಖಾ ಅವರು ಬಸ್ ಸಂಚಾರ ಅವಧಿಯನ್ನು ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ.
ಇಂದಿನಿಂದ ನೈಟ್ ಕರ್ಫ್ಯೂ ಸಮಯ ಕೂಡ ಬದಲಾವಣೆಯಾಗಿದೆ. ರಾತ್ರಿ 9 ಗಂಟೆಯಿಂದ ರಾತ್ರಿ 5 ಗಂಟೆಯವರಗೆ ಮಾತ್ರ ಕರ್ಫ್ಯೂ ಜಾರಿಯಾಗಿದೆ. ಹೀಗಾಗಿ ಬಿಎಂಟಿಸಿ ಬಸ್‍ಗಳ ಸಂಚಾರ ಅವಧಿ ಕೂಡ ಬದಲಾವಣೆಯಾಗಿದೆ. ಈ ಮೂಲಕ ಪ್ರಯಾಣಿಕರು ಹೆಚ್ಚಿನ ಸಂಖ್ಯೆ ಓಡಾಡಬಹುದು.
ಈ ಬಗ್ಗೆ ಬಿಎಂಟಿಸಿ ಎಂಡಿ ಶಿಖಾ, “ಭಾನುವಾರ ಬಿಎಂಟಿಸಿಗೆ ಗೈಡ್ ಲೈನ್ಸ್ ಬಂದಿದೆ. ಹೀಗಾಗಿ ಎಂಚ್‍ಎ ನಿರ್ದೇಶನದಂತೆ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ಬಸ್‍ಗಳನ್ನು ಓಡಿಸುತ್ತೇವೆ” ಎಂದು ಪಬ್ಲಿಕ್ ಟಿವಿ ಸ್ಪಷ್ಟಪಡಿಸಿದ್ದಾರೆ. ಕಂಟೈನ್ಮೆಂಟ್ ಝೋನ್‍ಗಳಲ್ಲಿ ಬಸ್‍ಗಳ ಓಡಾಟಕ್ಕೆ ಇನ್ನೂ ಸರ್ಕಾರ ಅವಕಾಶ ನೀಡಿಲ್ಲ. ಹೀಗಾಗಿ ಕಂಟೈನ್ಮೆಂಟ್ ಝೋನ್ ಏರಿಯಾಗಳಲ್ಲಿ ಬಸ್ ಓಡಾಟವಿಲ್ಲ.
https://youtu.be/OYEMtBeW6b0