ಬಾಗಲಕೋಟೆ: ಕೋವಿಡ್-19 ಲಾಕ್‌ಡೌನ್ ನಂತರ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರ ಬಾದಾಮಿಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಭೇಟಿ ನೀಡುತ್ತಿದ್ದಾರೆ.
ಜೂನ್ 3 ರಂದು ಬಾದಾಮಿಗೆ ಬಂದು ಮರುದಿನ ಬೆಂಗಳೂರಿಗೆ ಮರಳಲಿರುವ ಅವರು, ಕೊರೊನಾ ಸೋಂಕು ಹರಡದಂತೆ ತಾಲ್ಲೂಕು ಆಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರವಾಸದ ವೇಳೆ ಪರಿಶೀಲಿಸಲಿದ್ದಾರೆ.
ಬುಧವಾರ ಬೆಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಹೊರಟು ಕೊಪ್ಪಳ ಜಿಲ್ಲೆ ಗಿಣಿಗೇರಾಗೆ ಬರುವ ಸಿದ್ದರಾಮಯ್ಯ, ಅಲ್ಲಿಂದ ರಸ್ತೆ ಮಾರ್ಗವಾಗಿ ಬಾದಾಮಿ ಬರಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಕೋವಿಡ್-19 ವಾರಿಯರ್ಸ್‌ಗಳಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಬಾದಾಮಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
https://youtu.be/OYEMtBeW6b0