ಬೆಂಗಳೂರು: ರಾಜ್ಯದಲ್ಲಿ 1 ರಿಂದ 7ನೇ ತರಗತಿಯವರೆಗೂ ಆನ್ಲೈನ್ ಶಿಕ್ಷಣ ಇರುವುದಿಲ್ಲ. 8 ಹಾಗೂ 9ನೇ ತರಗತಿಗಳಿ ಆನ್ ಲೈನ್ ಶಿಕ್ಷಣದ ಬಗ್ಗೆ ಇನ್ನೂ ನಿರ್ಧರಿಸಬೇಕಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಮಾಧುಸ್ವಾಮಿ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನೀಡುವ ಸಂಬಂಧ ಪ್ರತಿಕ್ರಿಯಿಸಿದರು. 1-7ನೇ ತರಗತಿಯವರೆಗೂ ಮಕ್ಕಳಿಗೆ ಆನ್ಲೈನ್ ಎಜುಕೇಷನ್ ನೀಡದಿರಲು ಸಂಪಟುದಲ್ಲಿ ತೀರ್ಮಾನ ಮಾಡಲಾಗಿದೆ. ಹೀಗಾಗಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಆನ್ಲೈನ್ ಶಿಕ್ಷಣ ಇಲ್ಲ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ನಿಗದಿತ ವೇಳಾಪಟ್ಟಿ ಪ್ರಕಾರ ಪರೀಕ್ಷೆ ನಡೆಯಲಿದೆ ಎಂದರು
ಮಕ್ಕಳಿಗೆ ಆನ್ಲೈನ್ ಶಿಕ್ಷಣ ಬೇಡ ಎಂಬ ಒತ್ತಾಯ ಕೇಳಿಬಂದ ಹಿನ್ನಲೆಯಲ್ಲಿ ಎಲ್ಕೆಜಿ, ಯುಕೆಜಿ, 1-5ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡುವುದಿಲ್ಲ ಎಂದು ಪ್ರಾಥಮಿಕ ಸಚಿವ ಸುರೇಶ್ ಕುಮಾರ್ ನಿನ್ನೆ ಹೇಳಿದ್ದರು. ಈ ಹಿನ್ನಲೆಯಲ್ಲಿ ಇದೀಗ 1 ರಿಂದ 7ರವರೆಗೂ ಆನ್ಲೈನ್ ಶಿಕ್ಷಣ ಇಲ್ಲ ಎಂದು ಸಚಿವ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ಧಾರೆ.
ಸಾಕಷ್ಟು ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಅನಾನುಕೂಲವಾಗುವ ಕಾರಣಕ್ಕೆ 6 ಮತ್ತು 7 ತರಗತಿಗಳಿಗೆ ಆನ್ ಲೈನ್ ಶಿಕ್ಷಣ ಬೇಡ ಎಂದು ಸಂಪುಟ ಒಮ್ಮತದ ತೀರ್ಮಾನ ಮಾಡಿದೆ. 8ನೇ ತರಗತಿ ಹಾಗೂ 9ನೇ ತರಗತಿ ಆನ್ ಲೈನ್ ಕ್ಲಾಸ್ ನಡೆಯುತ್ತಿದ್ದು, ಇದನ್ನೂ ನಿಲ್ಲಿಸಬೇಕೇ ಅಥವಾ ಬೇಡವೇ ಎನ್ನುವುದರ ಬಗ್ಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
https://youtu.be/r6bH1CgI-Qg