ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇತ್ತ ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಹರಡಿ ಆತಂಕವನ್ನು ಹೆಚ್ಚಿಸಿದೆ.
ರಾಜಾಜಿನಗರದ ಪ್ರಿಂಟಿಂಗ್ ಪ್ರೆಸ್‍ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಗೆ ಇಂದು ಕೊರೊನಾ ತಗುಲಿರುವುದು ದೃಢಪಟ್ಟಿದೆ. ಅದರಲ್ಲೂ ಮಹಿಳೆ ಪ್ರಯಾಣದ ಹಿನ್ನೆಲೆ ಬೆಂಗಳೂರಿನ ಜನರನ್ನು ಬೆಚ್ಚಿಬೀಳುವಂತೆ ಮಾಡಿದೆ.
ಸೋಂಕಿತ ಮಹಿಳೆಯು ಶಿವಾಜಿನಗರದ ನಿವಾಸಿಯಾಗಿದ್ದು ಕೊರೊನಾ ಗುಣಲಕ್ಷಣಗಳು ಕಂಡುಬಂದ ಹಿನ್ನೆಲೆ ತಪಾಸಣೆ ಮಾಡಿಸಿಕೊಂಡಿದ್ದರು. ಸದ್ಯ ರಿಪೋರ್ಟ್ ಬಂದಿದ್ದು, ಸೋಂಕು ತಗುಲಿರುವುದು ಖಚಿತವಾಗಿದೆ. ಆದರೆ ಮಹಿಳೆ ಸೋಂಕು ಹೇಗೆ ಬಂತು ಎಂಬ ಮಾಹಿತಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಲಭ್ಯವಾಗಿಲ್ಲ. ಇತ್ತ ಮಹಿಳೆಯ ಪತಿಗೂ ಈಗ ಸೋಂಕಿನ ಲಕ್ಷಣಗಳು ಪತ್ತೆಯಾಗಿವೆ ಎನ್ನಲಾಗಿದೆ.
ಮಹಿಳೆ ಕೆಲಸ ಮಾಡುತ್ತಿದ್ದ ಪ್ರಿಂಟಿಂಗ್ ಪ್ರೆಸ್‍ನಲ್ಲಿ 30ಕ್ಕೂ ಹೆಚ್ಚು ಜನರು ಕಾರ್ಯ ನಿರ್ವಹಿಸುತ್ತಿದ್ದರು. ಅವರೆಲ್ಲರನ್ನೂ ಸಂಪರ್ಕಿಸಿ ಕ್ವಾರಂಟೈನ್ ಮಾಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಜೊತೆಗೆ ಪ್ರಿಂಟಿಂಗ್ ಪ್ರೆಸ್‍ಗೆ ಬೀಗ ಹಾಕಿ ಔಷಧಿ (ರಾಸಾಯನಿಕ) ಸಿಂಪಡಣೆ ನಡೆಸಿದೆ.
https://youtu.be/r6bH1CgI-Qg