Breaking News
Home / ಜಿಲ್ಲೆ / ಜೆಡಿಎಸ್ ಪರಿಷತ್‍ ಅಭ್ಯರ್ಥಿ ಆಯ್ಕೆ ಕುರಿತು ಗೌಡರ ನಿರ್ಧಾರವೇ ಫೈನಲ್

ಜೆಡಿಎಸ್ ಪರಿಷತ್‍ ಅಭ್ಯರ್ಥಿ ಆಯ್ಕೆ ಕುರಿತು ಗೌಡರ ನಿರ್ಧಾರವೇ ಫೈನಲ್

Spread the love

ಬೆಂಗಳೂರು, ಜೂ.15- ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಕ್ಕೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಮಾಡುವ ಅಧಿಕಾರವನ್ನು ಪಕ್ಷದ ವರಿಷ್ಠರಿಗೆ ನೀಡಲಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಇಂದು ಮಧ್ಯಾಹ್ನ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಪಕ್ಷದಲ್ಲಿ ಹಲವು ಆಕಾಂಕ್ಷಿಗಳಿದ್ದು, ಒಂದು ಸ್ಥಾನ ಮಾತ್ರ ಆಯ್ಕೆ ಮಾಡಲು ಜೆಡಿಎಸ್‍ಗೆ ಸಾಧ್ಯವಾಗಲಿದೆ. ಹೀಗಾಗಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ಕಸರತ್ತು ನಡೆಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಅವರು ಮತ್ತೊಂದು ಅವಧಿಗೆ ಸ್ಪರ್ಧಿಸಲು ಆಸಕ್ತರಾಗಿದ್ದಾರೆ. ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಆರ್.ಪ್ರಕಾಶ್, ಮಾಜಿ ಶಾಸಕ ಎನ್.ಹೆಚ್.ಕೋನರೆಡ್ಡಿ, ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ಸಿ.ರಾಜಣ್ಣ ಸೇರಿದಂತೆ ಹಲವು ಆಕಾಂಕ್ಷಿಗಳಿದ್ದಾರೆ.

ಪ್ರಸಕ್ತ ರಾಜಕೀಯ ಪರಿಸ್ಥಿತಿ ಹಿನ್ನಲೆಯಲ್ಲಿ ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆ ಸಂಬಂಧ ಶಾಸಕಾಂಗ ಪಕ್ಷದ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಒಂದು ಸ್ಥಾನ ಇರುವುದರಿಂದ ಪ್ರಾದೇಶಿಕತೆ, ಸಮುದಾಯವಾರು ಪ್ರಾತಿನಿಧ್ಯತೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.ಈ ಬಾರಿಯ ವಿಧಾನ ಪರಿಷತ್ ಚುನಾವಣೆ ಸ್ಪರ್ಧೆಗೆ ತೀವ್ರ ಪೈಪೋಟಿ ಉಂಟಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡುವ ಅಧಿಕಾರವನ್ನು ವರಿಷ್ಠರಿಗೆ ನೀಡಲಾಗಿದೆ. ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂ.18 ಕಡೆಯ ದಿನವಾಗಿದೆ. ಹೀಗಾಗಿ ಶೀಘ್ರದಲ್ಲೇ ಅಭ್ಯರ್ಥಿ ಆಯ್ಕೆ ಮಾಡುವ ಭರವಸೆಯನ್ನು ಪಕ್ಷದ ನಾಯಕರು ನೀಡಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ