Breaking News

ಗ್ರೀನ್ ಮತ್ತು ಆರೆಂಜ್ ಜೋನ್‌ಗಳಲ್ಲಿ ಹೆದ್ದಾರಿ ಕಾಮಗಾರಿ ನಡೆಸಲು ಅನುಮತಿ : ಡಿಸಿಎಂ ಕಾರಜೋಳ

Spread the love

ಬೆಂಗಳೂರು, ಏ.29-ಕೊರೊನಾ ನಿಯಂತ್ರಣಕ್ಕೆ ಪೂರಕ ನಿರ್ದೇಶನಗಳನ್ನು ಅನುಸರಿಸಿ ಕೆಂಪು ವಲಯವನ್ನು ಹೊರತು ಪಡಿಸಿ ಉಳಿದ ವಲಯಗಳಲ್ಲಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.

ಕೇಂದ್ರ ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಎಲ್ಲಾ ರಾಜ್ಯಗಳ ಲೋಕೋಪಯೋಗಿ ಹಾಗೂ ಸಾರಿಗೆ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಡಿಸಿಎಂ, ನೀರು ಸಂಗ್ರಹಕ್ಕೆ ಅನುಕೂಲವಾಗುವಂತೆ ಮಹಾರಾಷ್ಟ್ರ ದ ಮಾದರಿಯ ಬ್ರಿಡ್ಜ್ ಕೆಳಭಾಗದಲ್ಲಿ ವಿಯರ್ ನಿರ್ಮಾಣ ಕಾಮಗಾರಿಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದರು.

ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 8100 ಕೋಟಿ ರೂ ವೆಚ್ಚದ 2020-21 ನೇ ಸಾಲಿನ ಪ್ರಸ್ತಾವನೆಗಳನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ಕೊರೊನಾ ವೈರಸ್ ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನಗಳನ್ನು ಅಳವಡಿಸಿಕೊಂಡು, ರಸ್ತೆ ನಿರ್ಮಾಣ ಕಾಮಗಾರಿಗಳು, ಕಟ್ಟಡ ಕಾರ್ಮಿಕರು, ಸಿಬ್ಬಂದಿ ವರ್ಗದವರು , ವಾಹನ ಚಾಲಕರು, ಸಹಾಯಕರು ಮಾಸ್ಕ್ , ಸ್ಯಾನಿಟೈಜರ್ ಗಳನ್ನು ಉಪಯೋಗಿಸುವಂತೆ ಕ್ರಮಕೈಗೊಳ್ಳಲಾಗಿದೆ. ಕಾಮಗಾರಿ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮಕೈಗೊಳ್ಳಲಾಗಿದೆ.

ಸರಕು ಸಾಗಾಣಿಕೆ, ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಾಗಾಣಿಕೆ ವಾಹನಗಳಿಗೆ ಮುಕ್ತವಾಗಿ ಸಂಚರಿಸುವಂತೆ ಕ್ರಮಕೈಗೊಳ್ಳಲಾಗಿದೆ. ರೈತರಿಗೆ, ಕೃಷಿ ಕಾರ್ಮಿಕರಿಗೆ ಯಾವುದೇ ಅಡತಡೆ ಮಾಡದಂತೆ ಪೂರಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಶಕ್ತಿ ಮೀರಿ ಶ್ರಮಿಸುತ್ತಿದೆ ಎಂದು ಡಿಸಿಎಂ ವಿವರಿಸಿದರು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ