Breaking News

ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಸಿದ , ಅಭ್ಯರ್ಥಿಗಳು………

Spread the love

ಬೆಂಗಳೂರು: ವಿಧಾನ ಪರಿಷತ್​ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾದ ಪ್ರತಾಪಸಿಂಹ ನಾಯಕ್, ಸುನಿಲ್ ವಲ್ಯಾಪುರೆ, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್​​ ಹಾಗೂ ಕಾಂಗ್ರೆಸ್​​ ಅಭ್ಯರ್ಥಿಗಳಾದ ಬಿ.ಕೆ ಹರಿಪ್ರಸಾದ್​ ಮತ್ತು ನಸೀರ್ ಅಹ್ಮದ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ನಾಲ್ವರು ಅಭ್ಯರ್ಥಿಗಳಿಗೆ ಬಿ-ಫಾರಂ ವಿತರಿಸಿದರು. ಬಳಿಕ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಲ್ವರೂ ನಾಮಪತ್ರ ಸಲ್ಲಿಸಿದ್ರು. ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟಿಲ್, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ ಹಾಗೂ ಶಾಸಕರಾದ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.
ಕಾಂಗ್ರೆಸ್​ನ ಹರಿಪ್ರಸಾದ್​, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ದಿನೇಶ್ ಗುಂಡುರಾವ್ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ್ರು. ಹಾಗೇ ನಜೀರ್​ ಅಹಮ್ಮದ್​​ ಅವರ ನಾಮಿನೇಷನ್ ವೇಳೆ ಮಾಜಿ ಸಚಿವ ಯು.ಟಿ.ಖಾದರ್, ರಹೀಂ ಖಾನ್ ಹಾಗೂ ಶಾಸಕ ಹ್ಯಾರೀಸ್ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ