ಬೆಂಗಳೂರು: ವಿಧಾನಪರಿಷತ್‍ಗೆ ಸ್ಪರ್ಧಿಸಿದ್ದ ಏಳು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿಯ ಎಂಟಿಬಿ ನಾಗರಾಜ್, ಆರ್ ಶಂಕರ್, ಸುನಿಲ್ ವಲ್ಯಾಪುರೆ, ಪ್ರತಾಪ್ ಸಿಂಹ ನಾಯಕ್, ಕಾಂಗ್ರೆಸ್‍ನ ಹರಿಪ್ರಸಾದ್, ನಸೀರ್ ಅಹ್ಮದ್ ಮತ್ತು ಜೆಡಿಎಸ್‍ನ ಗೋವಿಂದರಾಜು ಅವಿರೋಧ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಹೆಚ್.ವಿಶ್ವನಾಥ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಟಿಕೆಟ್ ತಪ್ಪಿತ್ತು.
ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಏಳು ಮಂದಿಯಷ್ಟೇ ಕಣದಲ್ಲಿ ಇದ್ದ ಕಾರಣ ಎಲ್ಲರೂ ಅವಿರೋಧ ಆಯ್ಕೆ ಆಗಿದ್ದಾರೆ.