Home / ಜಿಲ್ಲೆ / ಬೆಂಗಳೂರು / ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಎಚ್ಚರಿಕೆ …….

ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಎಚ್ಚರಿಕೆ …….

Spread the love

ಬೆಂಗಳೂರು,ಜೂ.29- ನಾಳೆಯೊಳಗೆ ಖಾಸಗಿ ಆಸ್ಪತ್ರೆಯವರು ಸೋಂಕಿತರಿಗೆ ಕೊರೊನಾ ಚಿಕಿತ್ಸೆ ನೀಡಲು ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಲೇಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಖಾಸಗಿ ಆಸ್ಪತ್ರೆ ವೈದ್ಯರಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

ಇಂದು ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಅವರು, ಏನು ಮಾಡುತ್ತೀರೋ ಬಿಡುತ್ತೀರೋ ಗೊತ್ತಿಲ್ಲ.ನಾಳೆಯೊಳಗೆ ಕನಿಷ್ಠ ಪಕ್ಷ ಎರಡುವರೆ ಸಾವಿರ ಹಾಸಿಗೆಗಳನ್ನು ಸರ್ಕಾರಕ್ಕೆ ನೀಡಲೇಬೇಕೆಂದು ತಾಕೀತು ಮಾಡಿದರು.

ಒಂದು ಹಂತದಲ್ಲಿ ಖಾಸಗಿ ಆಸ್ಪತ್ರೆ ಇಷ್ಟು ಪ್ರಮಾಣದ ಹಾಸಿಗೆಗಳನ್ನು ನೀಡಲುಸಾಧ್ಯವಿಲ್ಲ ಎಂದು ಸಬೂಬು ಹೇಳದೆ ಸಿಎಂ ಬಿಎಸ್‍ವೈ ಅವರು ಯಾವುದೇ ಕಾರಣವನ್ನು ನೀಡದೇ ನಾಳೆಯೊಳಗೆ ಶೇ.50ರಷ್ಟು ಹಾಸಿಗೆಗಳನ್ನು ನೀಡಬೇಕು. ಇನ್ನು ಒಂದು ಗಂಟೆಯೊಳಗೆ ನೀವು ಕುಳಿತು ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಬೇಕೆಂದು ತೀರ್ಪು ಕೊಟ್ಟರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿಯವರು ಕನಿಷ್ಟ ಎರಡು ಸಾವಿರ ಹಾಸಿಗೆಗಳನ್ನು ನೀಡಲೇಬೇಕು. ಇದಕ್ಕಿಂತ ಕಡಿಮೆ ಪ್ರಮಾಣವನ್ನು ನಾವು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ದೇಶ ಮಹಾನಗರಗಳಾದ ದೆಹಲಿ, ಮುಂಬೈಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ತುಂಬ ಕಡಿಮೆ ಇದೆ. ನಮ್ಮಲ್ಲಿ ಸೋಂಕು ಪ್ರಮಾಣಗಳ ಜೊತೆ ಸಾವಿನ ಸಂಖ್ಯೆಯು ಕನಿಷ್ಠ ಪ್ರಮಾಣದಲ್ಲಿದೆ.

ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಬಾರದೆಂದು ಮನವಿ ಮಾಡಿದರು. ಸರ್ಕಾರ ಎಲ್ಲಿಯೂ ಕೊರೊನಾ ನಿಯಂತ್ರಿಸುವುದರಲ್ಲಿ ಹಿಂದೆ ಸರಿದಿಲ್ಲ. ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದೆ. ಸಾರ್ವಜನಿಕರಿಗೆ ವದಂತಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ