ಬೆಂಗಳೂರು,ಜು.1-ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ನಿಷೇಧಾಜ್ಞೆಯನ್ನು ಮತ್ತೆ ಒಂದು ತಿಂಗಳ ಕಾಲ ಮುಂದುವರೆಸಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಜೂ.26ರ ಮಧ್ಯರಾತ್ರಿ 12 ಗಂಟೆಗೆ ಅಂತ್ಯವಾಗಿರುವ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144/1 ನಿಷೇಧಾಜ್ಞೆಯನ್ನು ಜು.26ರ ಮಧ್ಯರಾತ್ರಿವರೆಗೂ 30 ದಿನಗಳ ಕಾಲ ಮುಂದುವರೆಸಲಾಗಿದೆ ಎಂದು ಹೇಳಿದ್ದಾರೆ.ನಿಷೇಧಾಜ್ಞೆ ವೇಳೆ ಒಳಾಂಗಣ ಕಾರ್ಯಕ್ರಮದಲ್ಲಿ 20 ಜನಕ್ಕೂ ಹೆಚ್ಚು ಜನ ಸೇರುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ತಮ್ಮ ಮೂಗು, ಬಾಯಿ ಮುಚ್ಚಿಕೊಳ್ಳಬೇಕು. ಪ್ರತಿಯೊಬ್ಬ ವ್ಯಕ್ತಿಯು ಸಾರ್ವಜನಿಕ ಸ್ಥಳಗಳಲ್ಲಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಕನಿಷ್ಠ ಒಂದು ಮೀಟರ್ ಅಂತರ ಕಾಯ್ದುಕೊಳ್ಳಬೇಕು ಎಂದು ಆದೇಶದಲ್ಲಿ ಪೊ ಲೀಸ್ ಆಯುಕ್ತರು ತಿಳಿಸಿದ್ದಾರೆ.
Laxmi News 24×7