Breaking News

ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

Spread the love

ಬೆಂಗಳೂರು: ಲಾಕ್‍ಡೌನ್3 ಘೋಷಣೆಯಾಗಿರುವುರಿಂದ ವಿವಿಧ ಸ್ಥಳಗಳಲ್ಲಿ ಸಿಕ್ಕಿಹಾಕಿಕೊಂಡು ಊರಿಗೆ ಹೋಗಲು ಪರದಾಡುತ್ತಿರುವ ಕಾರ್ಮಿಕರು, ಯಾತ್ರಿಕರು, ವಿದ್ಯಾರ್ಥಿಗಳು ಮತ್ತಿತರರಿಗೆ ಅನುಕೂಲವಾಗುವಂತೆ ಒಂದು ದಿನ ಅಥವಾ ಒಂದು ಕಡೆಗೆ ಹೋಗಲು ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಒಂದು ದಿನ, ಒಂದು ಕಡೆಗೆ ಹೋಗಲು ಮಾತ್ರ ಈ ಪಾಸ್ ಬಳಸಬಹುದು. ಅಂತರ್ ಜಿಲ್ಲೆಗಳಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಮ್ಮ ಆದೇಶದಲ್ಲಿ ಪ್ರಕಟಿಸಿದ್ದಾರೆ.

ಪಾಸ್ ಬೇಕಾದವರು ತಮ್ಮ ದಾಖಲೆಗಳನ್ನು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅಥವಾ ಕಮಿಷನರೇಟ್‍ಗಳಲ್ಲಿ ಉಪ ಪೊಲೀಸ್ ಕಮಿಷನರ್ ಗೆ  ಪಾಸ್‍ಗಳನ್ನು ವಿತರಿಸಲು ಅಧಿಕಾರ ನೀಡಲಾಗಿದೆ.

ಊರುಗಳಿಗೆ ಹಿಂತಿರುಗುವ ಜನರ ಪ್ರಯಾಣದ ಸಮಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶ, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಪಾಸ್ ಪಡೆದವರು ಪ್ರಯಾಣಿಸುವ ಜಿಲ್ಲೆಗಳಲ್ಲಿ ಅಧಿಕಾರಿಗಳು ಆರೋಗ್ಯ ತಪಾಸಣೆ ನಡೆಸಬೇಕು. ಒಂದ ವೇಳೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದರೆ ಕೂಡಲೇ ಅವರನ್ನು ಕೋವಿಡ್ ಆಸ್ಪತ್ರೆಗೆ ಕಳುಹಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

 

ಲಾಕ್ ಡೌನ್ ನಿಂದ ಒಂದೆಡೆ ಸಿಲುಕಿರುವ ವಲಸೆ ಕಾರ್ಮಿಕರು,ಯಾತ್ರಾರ್ಥಿಗಳು, ಪ್ರವಾಸಿಗರು,ವಿದ್ಯಾರ್ಥಿಗಳು ಮತ್ತೊಂದು ಕಡೆ ತೆರಳಲು ಒಂದು ದಿನಕ್ಕೆ,ಒಂದು ಬಾರಿಗೆ ಪ್ರಯಾಣಿಸಲು ಪಾಸ್ ಗಳನ್ನು ಸಂಬಂಧಿತ ಜಿಲ್ಲಾಧಿಕಾರಿಗಳು/ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೀಡಲಿದ್ದಾರೆ.ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

View image on Twitter


Spread the love

About Laxminews 24x7

Check Also

ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Spread the love ಬೆಂಗಳೂರು: ಜಾತಿ ಗಣತಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಕೈಗೆತ್ತಿಕೊಳ್ಳಲು ಸರಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ