Breaking News

ಕುಡುಕರ ಎಡವಟ್ಟಿನಿಂದ ಮೂರ್ನಾಲ್ಕು ಬಣವೆಗಳಿಗೆ ಬೆಂಕಿ

Spread the love

ಬಳ್ಳಾರಿ: ಲಾಕ್‍ಡೌನ್ ಸಡಿಲಿಕೆ ಮಾಡಿ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದೆ ತಡ ಮದ್ಯಪ್ರಿಯರು ಮದ್ಯದಂಗಡಿ ಮುಂದೆ ಕ್ಯೂ ನಿಂತು ಖರೀದಿಸುತ್ತಿದ್ದಾರೆ. ಅಲ್ಲದೆ ಸಿಕ್ಕಿಸಿಕ್ಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿದ್ದಾರೆ. ಇದೀಗ ಕುಡುಕರು ಮಾಡಿದ ಎಡವಟ್ಟಿನಿಂದಾಗಿ ಮೂರು ಬಣವೆಗಳು ಹೊತ್ತಿ ಉರಿದಿರುವ ಘಟನೆ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯಲ್ಲಿ ನಡೆದಿದೆ.

ಕಪ್ಪಗಲ್ಲು ರಸ್ತೆಯ ಡ್ರೀಮ್ ವರ್ಲ್ಡ್ ಶಾಲೆಯ ಹಿಂಭಾಗದ ಹೊಲದಲ್ಲಿರುವ ಮೂರು ಬಣವೆಗಳಿಗೆ ಬೆಂಕಿ ಬಿದ್ದಿದೆ. ಅಲ್ಲದೇ ಪಕ್ಕದಲ್ಲಿದ್ದ ಎಮ್ಮೆಗಳ ಮೈಗೂ ಬೆಂಕಿ ಹೊತ್ತಿಕೊಂಡಿದೆ. ಸುರೇಶ್ ಎಂಬವರ ಮೂರು ಬಣವೆಗಳಿಗೆ ಬೆಂಕಿಬಿದ್ದಿದೆ. ಜೊತೆಗೆ ದನದ ಕೊಟ್ಟಿಗೆಯಲ್ಲಿದ್ದ 12 ಎಮ್ಮೆಗಳ ಪೈಕಿ ಎರಡು ಎಮ್ಮೆಗಳ ಮೈಗೆ ಬೆಂಕಿ ಹೊತ್ತಿಕೊಂಡಿದ್ದು, ಸಣ್ಣಪುಟ್ಟ ಗಾಯಗಳಾಗಿವೆ.

ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಲು ಹರಸಾಹಸಪಟ್ಟರು. ಮದ್ಯ ಅಮಲಿನಲ್ಲಿದ್ದವರು ಸಿಗರೇಟ್ ತುಂಡು ಬೀಸಾಡಿದ್ದರಿಂದ ಈ ಬೆಂಕಿ ತಗುಲಿದೆ. ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜನರು ಹೊಲ, ಗದ್ದೆ ಎಲ್ಲೆಂದರಲ್ಲಿ ಕುಳಿತು ಎಣ್ಣೆ ಹೊಡೆಯುವುದು ಹೆಚ್ಚಾಗಿದೆ. ಹೀಗಾಗಿ ವಿಪರೀತ ಮದ್ಯ ಸೇವನೆ ಮಾಡಿ ಸಿಗರೇಟ್‍ನಿಂದ ಬಣವೆಗಳಿಗೆ ಬೆಂಕಿ ಹೊತ್ತಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Spread the love ಬಳ್ಳಾರಿ: ಸಂಡೂರು ಕಾಂಗ್ರೆಸ್ ಭದ್ರಕೋಟೆ. ಯಾರೇ ಬಂದರೂ ಕಾಂಗ್ರೆಸ್ ಗೆಲ್ಲುತ್ತದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ