ಬೆಂಗಳೂರು – ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಹಲವಾರು ರೀತಿಯ ವೃತ್ತಿನಿರತರಿಗೆ ಕರ್ನಾಟಕ ಸರಕಾರ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟೂ 1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂಬಂಧ ಬುಧವಾರ ಮಾಹಿತಿ ನೀಡಿದ್ದಾರೆ. ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರು, ಮಡಿವಾಳರು ಸೇರಿದಂತೆ ಹಲವಾರು ವರ್ಗಗಳಿಗೆ ತಲಾ 5 ಸಾವಿರ ರೂ. ಪರಿಹಾರ ನೀಡುವ ಘೋಷಣೆ ಮಾಡಿದ್ದಾರೆ.
7.75 ಲಕ್ಷ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಪರಿಹಾರ ದೊರೆಯಲಿದೆ. ಜೊತೆಗೆ ಈಗಾಗಲೆ 2 ಸಾವಿರ ರೂ. ನೀಡಲಾಗಿದ್ದ ಕಟ್ಟಡ ಕಾರ್ಮಿಕರಿಗೆ ಹೆಚ್ಚುವರಿಯಾಗಿ 3 ಸಾವಿರ ರೂ. ಸೇರಿಸಿ ಒಟ್ಟೂ 5 ಸಾವಿರ ರೂ ನಿಡಲಾಗುತ್ತದೆ. ಒಟ್ಟೂ 15 ಲಕ್ಷ ಕಟ್ಟಡ ಕಾರ್ಮಿಕರಿಗೆ ಪ್ರಯೋಜನವಾಗಲಿದೆ. ವಲಸೆ ತಪ್ಪಿಸಲು ಈ ಘೋಷಣೆ ಮಾಡಲಾಗಿದೆ.
ಇದರ ಜೊತೆಗೆ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಿಗಳು ಸೇರಿದಂತೆ ಅನೇಕರಿಗೆ ವಿದ್ಯುತ್ ಬಿಲ್ ತುಂಬಲು ವಿನಾಯಿತಿ ಸೇರಿದಂತೆ ಅನೇಕ ಘೋಷಣೆಗಳನ್ನು ಯಡಿಯೂರಪ್ಪ ಮಾಡಿದ್ದಾರೆ