Breaking News

ಸಾರಿಗೆ ನೌಕರರ ವೇತನವನ್ನು ಮೂರು ದಿನಗಳಲ್ಲಿ ಬಿಡುಗಡೆ ಆಗಲಿದೆ: ಸಚಿವ ಲಕ್ಷ್ಮಣ್​ ಸವದಿ

Spread the love

ಬೆಂಗಳೂರು : ಲಾಕ್ ಡೌನ್ ಜಾರಿಯಾದ ಪರಿಣಾಮ ತಡೆಹಿಡಿಯಲಾಗಿದ್ದ ಸಾರಿಗೆ ನೌಕರರ ವೇತನವನ್ನು
ಮೂರು ದಿನಗಳಲ್ಲಿ ಬಿಡುಗಡೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಾನು ಮುಖ್ಯಮಂತ್ರಿ ಬಳಿ ಮಾತನಾಡಿದ್ದೇನೆ. ಇನ್ನು 3-4 ದಿನಗಳಲ್ಲಿ ಸಂಬಳ ಆಗುತ್ತದೆ. ಸರ್ಕಾರದಿಂದ ನೇರವಾರಿ 326 ಕೋಟಿ ರೂಪಾಯಿಯನ್ನು ಪಡೆದು ಸಂಬಳ ನೀಡುತ್ತೇವೆ ಎಂದಿದ್ದಾರೆ.

ಸಾರಿಗೆ ಸಿಬ್ಬಂದಿಗಳ ವೇತನವನ್ನು ಮೂರು-ನಾಲ್ಕು ದಿನಗಳಲ್ಲಿ ಅವರವರ ಖಾತೆಗಳಿಗೆ ತಲುಪಿಸುತ್ತೇವೆ. ಸಿಬ್ಬಂದಿಗಳಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ. ಸಾರಿಗೆ ಸಿಬ್ಬಂದಿಗಳ ವೇತನ ಸಂಬಂಧ ನಾನೀಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಡನೆ ಮಾತನಾಡಿದ್ದೇನೆ.

ಸರ್ಕಾರದಿಂದ ನೇರವಾಗಿ 326 ಕೋಟಿ ರೂಪಾಯಿ ಪಡೆದುಕೊಂಡು ವೇತನ ನೀಡುವ ಕೆಲಸ ಮಾಡಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ. ಕಳೆದ ನಾಲ್ಕು ದಿನಗಳಿಂದ 3500 ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದರು.

ಕೆ ಎಸ್ ಆರ್ ಟಿ ಸಿ ಮತ್ತು ಇತರೆ ಸಾರಿಗೆ ನಿಗಮಗಳು ಕಾರ್ಮಿಕರುಗಳಿಗಾಗಿ ಬಸ್ ವ್ಯವಸ್ಥೆ ಮಾಡಿದ್ದು, ಈ ಸಂದರ್ಭದಲ್ಲಿ ವೈದ್ಯರು, ಚಾಲಕರು, ನಿರ್ವಾಹಕರು ಪೋಲಿಸ್ ಸಿಬ್ಬಂದಿ, ಬಿ ಬಿ ಎಂ ಪಿ ಪೌರ ಕಾರ್ಮಿಕರು , ಸಿವಿಲ್ ಡಿಪೆನ್ಸ್ ಸಿಬ್ಬಂದಿಗಳು,‌ನಿಗಮದ ಸಿಬ್ಬಂದಿಗಳು ಅವಿರತ ಸೇವೆ ಸಲ್ಲಿಸಿದ್ದು ಅವರನ್ನು ಗೌರವಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಲಾಯಿತು. ಲಕ್ಷ್ಮಣ ಸವದಿರವರು , ಕೊರೊನಾ ವಾರಿಯರ್ಸ್‌ಗಳಿಗೆ ಪುಷ್ಪವೃಷ್ಠಿ ಮಾಡುವ ಮೂಲಕ ಗೌರವ ಸಮರ್ಪಿಸಿದರು.

ಈ ವೇಳೆ ಭಯಪಡದೇ ಸಾರಿಗೆ ಸಿಬ್ಬಂದಿ ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಜೀವದ ಭಯವನ್ನ ತೊರೆದು ವೈದ್ಯರು, ಆಶಾ ಕಾರ್ಯಕರ್ತೆಯರು, ಸಾರಿಗೆ ಸಿಬ್ಬಂದಿಗಳು ಕೆಲಸ ಮಾಡಿದ್ದಾರೆ ಅಂತಹ ಸಿಬ್ಬಂದಿಗಳಿಗೆ ಹಾಗೂ ಆ ತಂಡಕ್ಕೆ ಅಭಿನಂದನೆ ಸಲ್ಲಿಸುವ ಕೆಲಸವನ್ನ ಸರ್ಕಾರದ ವತಿಯಿಂದ ಮಾಡಿದ್ದೇವೆ ಎಂದರು.

ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ಸಂಘಸಂಸ್ಥೆಗಳು ಬ್ರೆಡ್ ಹಾಗೂ ಆಹಾರಗಳನ್ನಾ ಕೂಡ ಸಾಕಷ್ಟು ಜನರಿಗೆ ಕೊಟ್ಟಿದ್ದಾರೆ.ಅವರಿಗೂ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಹಾಗೇ ಮಾಧ್ಯಮದವರು ತಪ್ಪು ತಿದ್ದುವ ಕೆಲಸ ಮಾಡುತ್ತಿದ್ದು ಅವರಿಗೂ ಧನ್ಯವಾದ ಸಲ್ಲಿಸಿದ್ದಾರೆ. ಕಾರ್ಮಿಕರನ್ನು ಉಚಿತವಾಗಿ ಅವರ ಊರಿಗೆ ಕಳಿಸಲು ನಾಳೆ ಕೊನೇ ದಿನ ಎಂದು ತಿಳಿಸಿದ್ದಾರೆ


Spread the love

About Laxminews 24x7

Check Also

ನಮ್ಮ ಬೆಂಗಳೂರಿನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದ ಹೆಸರಿರೋದು ಎಂ. ಚಿನ್ನಸ್ವಾಮಿ ಅವರ ಹೆಸರಲ್ಲಿ. ಅಷ್ಟೊಂದು ಘಟಾನುಘಟಿ ಕ್ರಿಕೆಟ್ ಪಟುಗಳಿದ್ದ ನಮ್ಮ ರಾಜ್ಯದಲ್ಲಿ ಇಂತಹ ದೊಡ್ಡ ಕ್ರಿಕೆಟ್ ಸ್ಥಾವರಕ್ಕೆ ಇವರ ಹೆಸರಿರಬೇಕಾದರೆ ಈ ಮಹನೀಯರ ಸಾಮರ್ಥ್ಯ ಎಂತದ್ದಿರಬಹುದು!

Spread the loveಎಂ. ಚಿನ್ನಸ್ವಾಮಿ ನಮ್ಮ ಬೆಂಗಳೂರಿನಲ್ಲಿರುವ ಕ್ರಿಕೆಟ್ ಕ್ರೀಡಾಂಗಣದ ಹೆಸರಿರೋದು ಎಂ. ಚಿನ್ನಸ್ವಾಮಿ ಅವರ ಹೆಸರಲ್ಲಿ. ಅಷ್ಟೊಂದು ಘಟಾನುಘಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ