Breaking News

ಅಬಕಾರಿ ಸುಂಕ ಏರಿಕೆ – ಮದ್ಯ ಮಾರಾಟ ಇಳಿಕೆ……

Spread the love

ಬೆಂಗಳೂರು: ಸಿಎಂ ಯಡಿಯೂರಪ್ಪ ಮದ್ಯದ ಮೇಲೆ ಶೇ.17 ಅಬಕಾರಿ ಸುಂಕ ವಿಧಿಸಿದ ಬೆನ್ನಲ್ಲೇ ಬುಧವಾರಕ್ಕೆ ಹೋಲಿಸಿದ್ದಲ್ಲಿ ಮದ್ಯ ಮಾರಾಟ ಇಳಿಕೆಯಾಗಿದೆ.

ಬುಧವಾರ ಒಟ್ಟು 230 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದ್ದರೆ ಗುರುವಾರ ಒಟ್ಟು 165 ಕೋಟಿ ರೂ. ಮದ್ಯ ಮಾರಾಟವಾಗಿದೆ ಎಂದು ಕೆಎಸ್‍ಬಿಸಿಎಲ್ (ಕರ್ನಾಟಕ ಪಾನೀಯ ನಿಯಮ) ತಿಳಿಸಿದೆ.

ಇಂದು 152 ಕೋಟಿ ರೂ. ಮೌಲ್ಯದ 27.56 ಲಕ್ಷ ಲೀಟರ್ ಇಂಡಿಯನ್ ಮೇಡ್ ಲಿಕ್ಕರ್(ಐಎಂಎಲ್), 13 ಕೋಟಿ ಮೌಲ್ಯದ 5.93 ಲಕ್ಷ ಲೀಟರ್ ಬೀರ್ ಮಾರಾಟವಾಗಿದೆ. ಬುಧವಾರ 15.6 ಕೋಟಿ ರೂ. ಮೌಲ್ಯದ 7 ಲಕ್ಷ ಲೀಟರ್ ಬಿಯರ್, 216 ಕೋಟಿ ರೂ. ಮೌಲ್ಯದ 39 ಲಕ್ಷ ಲೀಟರ್ ಐಎಂಎಲ್ (ಇಂಡಿಯನ್ ಮೇಡ್ ಲಿಕ್ಕರ್) ಮಾರಾಟವಾಗಿತ್ತು. ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಮೊದಲ ದಿನ 45 ಕೋಟಿ ರೂ. ಹಾಗೂ 2ನೇ ದಿನ 197 ಕೋಟಿ ರೂ. ಮದ್ಯ ಮಾರಾಟವಾಗಿತ್ತು.

ಇತ್ತ ಲಾಕ್‍ಡೌನ್ ನಿಂದಾಗಿ ಎಣ್ಣೆ ಇಲ್ಲದೆ 42 ದಿನಗಳನ್ನು ಮುಗಿಸಿದ ಮದ್ಯಪ್ರಿಯರಿಗೆ ಸರ್ಕಾರ ನಿನ್ನೆ ಬಿಗ್ ಶಾಕ್ ನೀಡಿತ್ತು. ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಒಂದು ಕಡೆ ಕೋವಿಡ್ ನಿಯಂತ್ರಣ ಮತ್ತೊಂದು ಕಡೆ ಆರ್ಥಿಕ ಚಟುವಟಿಕೆ ಎರಡನ್ನೂ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹೀಗಾಗಿ ಶೇ.11ರಷ್ಟು ಅಬಕಾರಿ ಸುಂಕ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದರು. ಬಜೆಟ್ ನಲ್ಲಿ ಮೊದಲೇ ಶೇ.6 ರಷ್ಟು ಹೆಚ್ಚಳವಾಗಿದ್ದರಿಂದ ಒಟ್ಟು ಶೇ.17 ರಷ್ಟು ಅಬಕಾರಿ ಸುಂಕ ಏರಿಕೆ ಆಗಿತ್ತು.


Spread the love

About Laxminews 24x7

Check Also

ಆರ್​ಟಿಒ ಅಧಿಕಾರಿಗಳಿಂದ 98 ಆಟೋಗಳು ಜಪ್ತಿ

Spread the loveಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ