ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ ಮದ್ಯ ಸಿಗದೆ ಸೈಲೆಂಟ್ ಆಗಿದ್ದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗ ವೈಲೆಂಟ್ ಆಗಿದೆ. ಮದ್ಯ ಮಾರಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದಾಗಿನಿಂತ ನಿತ್ಯವೂ ಒಂದಿಲ್ಲೊಂದು ಹಲ್ಲೆ, ಕೊಲೆ ಪ್ರಕರಣಗಳು ನಡೆಯುತ್ತಲೇ ಇವೆ.
ಕೆಲ ದುಷ್ಕರ್ಮಿಗಳು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದಿದ್ದ ಓರ್ವ ರೌಡಿಶೀಟರ್‌ನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆಗೈದಿದ್ದಾರೆ. ಬ್ಯಾಟರಾಯನಪುರದ ಅಶೋಕ್ ಅಲಿಯಾಸ್ ದಡಿಯಾ ಕೊಲೆಯಾದ ರೌಡಿಶೀಟರ್. ಬ್ಯಾಟರಾಯನಪುರದ ಭಾರತೀನಗರದಲ್ಲಿ ಘಟನೆ ನಡೆದಿದೆ.

ಗುರುವಾರ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ಅಶೋಕ್‍ನನ್ನು ಟಾರ್ಗೆಟ್ ಮಾಡಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿಯೇ ಈ ಕೊಲೆ ನಡೆದಿರಬಹುದು. ಗೆಳೆಯರಿಂದಲೇ ಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಬ್ಯಾಟರಾಯನಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಅವರು, ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.
Laxmi News 24×7