ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್ ಆಸ್ಪತ್ರೆಯಲ್ಲಿ ಬೆಳಗ್ಗೆ ಗಂಬ್ಯಾಪುರ ಗ್ರಾಮದ ನಿವಾಸಿ ಬಸವರಾಜ್ ಕುರುವಿನಕೊಪ್ಪ(45) ಸಾವನ್ನಪ್ಪಿದ್ದರೆ, ಇದೀಗ ಮೃತನ ಸಹೋದರಿ ಜಂಬಕ್ಕ ಕಟ್ಟಿಮನಿ(47) ಸಹ ಮೃತಪಟ್ಟಿದ್ದಾಳೆ. ಲಾಕ್‍ಡೌನ್ ಇದ್ದ ಕಾರಣ ಇವರಿಗೆ ಮದ್ಯ ಸಿಕ್ಕಿರಲಿಲ್ಲ. ಮದ್ಯ ವ್ಯಸನಿಗಳಾಗಿದ್ದ ಇವರು ಕಳೆದ ಒಂದು ತಿಂಗಳಿಂದ ಮದ್ಯ ಸೇವಿಸಿರಲಿಲ್ಲ. ಅಲ್ಲದೆ ಮೂರು ದಿನಗಳಿಂದ ಸ್ಯಾನಿಟೈಸರ್ ದಾಸರಾಗಿದ್ದರು.

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗ್ಗೆ ಕಿಮ್ಸ್ ಆಸ್ಪತ್ರೆಯಲ್ಲಿ ತಮ್ಮ ಸಾವನ್ನಪ್ಪಿದ್ದ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅಕ್ಕನೂ ಕಿಮ್ಸ್ ನಲ್ಲಿ ಸಾವನ್ನಪ್ಪಿದ್ದಾಳೆ. ಇವರಿಬ್ಬರ ಸಾವು ಧಾರವಾಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಈ ಬಗ್ಗೆ ಕಲಘಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.