Breaking News

ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಡುತ್ತಿರುವ ಸಿಎಂಗಳ ಪಟ್ಟಿಯಲ್ಲಿ ಬಿಎಸ್ವೈಗೆ 2ನೇ ಸ್ಥಾನ..!

Spread the love

ಬೆಂಗಳೂರು, ಮೇ 11-ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ವೈರಸ್ ಹೆಚ್ಚು ಹಬ್ಬದಂತೆ ಯಶಸ್ವಿಯಾಗಿ ನಿರ್ವಹಣೆ ಮಾಡಿದ ಮುಖ್ಯಮಂತ್ರಿಗಳ ಪೈಕಿ ಬಿ.ಎಸ್.ಯಡಿಯೂರಪ್ಪನವರಿಗೆ ದೇಶದಲ್ಲೇ 2ನೇ ಸ್ಥಾನ ದೊರಕಿದೆ.

ಟೈಮ್ಸ್ ನೌ ಹಾಗೂ ಓರೊ ಮಾಕ್ಸ್ ಜಂಟಿಯಾಗಿ ದೇಶದಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಮುಖ್ಯಮಂತ್ರಿಗಳ ಪೈಕಿ ದೆಹಲಿಯಲ್ಲಿ ಅರವಿಂದ್ ಕ್ರೇಜಿವಾಲ್‍ಗೆ ಮೊದಲ ಸ್ಥಾನ ಬಂದಿದ್ದರೆ, ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ 2ನೇ ಸ್ಥಾನ ಸಿಕ್ಕಿದೆ.

ಕೊರೊನಾ ಭಾರತಕ್ಕೆ ಅಧಿಕೃತವಾಗಿ ಕಾಲಿಟ್ಟ ನಂತರ ಅದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡ ನಿರ್ಧಾರಕ್ಕೆ ಸಾರ್ವಜನಿಕರು ಪ್ರಶಂಸೆ ಸುರಿಮಳೆಗೈದಿದ್ದಾರೆ.  ನರೇಂದ್ರ ಮೋದಿ ತೆಗೆದುಕೊಂಡ ತೀರ್ಮಾನಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೋದಿಯಿಂದ ಮಾತ್ರ ಇದನ್ನು ನಿರ್ವಹಣೆ ಮಾಡಲು ಸಾಧ್ಯವಾಗಿದೆ. ಬೇರೆ ನಾಯಕರಿಂದ ನಿಯಂತ್ರಿಸಲು ಅಷ್ಟು ಸುಲಭವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯಲ್ಲಿ 2ನೇ ಬಾರಿ ಅಧಿಕಾರ ಹಿಡಿದ ಅರವಿಂದ್ ಕೇಜ್ರಿವಾಲ್ ಕೊರೊನಾ ನಿಯಂತ್ರಿಸಲು ತೆಗೆದುಕೊಂಡ ತೀರ್ಮಾನಗಳಿಗೆ ಶೇ.65ರಷ್ಟು ಸಾರ್ವಜನಿಕರು ಜೈ ಎಂದಿದ್ದಾರೆ. ದೆಹಲಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿದ್ದರೂ ಕೇಜ್ರಿವಾಲ್ ತೆಗೆದುಕೊಂಡ ಕ್ರಮ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.

# 2ನೇ ಸ್ಥಾನದಲ್ಲಿ ಯಡಿಯೂರಪ್ಪ:
ಶೇ.56ರಷ್ಟು ಸಾರ್ವಜನಿಕರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರ ತೀರ್ಮಾನಗಳಿಗೆ ಜೈ ಎಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಅಧಿಕೃತವಾಗಿ ಬಂದ ನಂತರ ಮೊದಲ ದಿನದಿಂದ ಇಂದಿನವರೆಗೂ ಸರ್ಕಾರ ಕ್ರಮಗಳನ್ನು ಜನರು ಮುಕ್ತವಾಗಿ ಸ್ವಾಗತಿಸಿದ್ದಾರೆ.

ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಾದ ನಂತರ ಯಡಿಯೂರಪ್ಪ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಕೊರೊನಾ ನಿಯಂತ್ರಿಸಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಅದರಲ್ಲೂ ಯಡಿಯೂರಪ್ಪನವರು ಏಕಾಂಗಿಯಾಗಿ ತೆಗೆದುಕೊಂಡಿರುವ ನಿರ್ಧಾರಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.

ದೇಶದ ಮಹಾ ಮೆಟ್ರೊನಗರವೆನಿಸಿದ ದೆಹಲಿ ಮತ್ತು ಮುಂಬೈನಲ್ಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತೆಗೆದುಕೊಂಡಿರುವ ಕ್ರಮಗಳನ್ನು ಸ್ವಾಗತಿಸಿದ್ದಾರೆ. ಉಳಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ತೀರ್ಮಾಗಳಿಗೆ ಸಾರ್ವಜನಿಕರಿಂದ ಶೇ.49ರಷ್ಟು ಸಮ್ಮತಿ ಸಿಕ್ಕಿದೆ. ತಮಿಳುನಾಡಿನ ಯಡಪ್ಪಾಡಿ ಪಳನಿಸ್ವಾಮಿಗೆ ಶೇ.40ರಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆದರೆ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳಿರುವ ರಾಜ್ಯಗಳ ಪೈಕಿ ತಮಿಳುನಾಡು ಕೂಡ ಒಂದಾಗಿದೆ. ಆದರೂ ಮುಖ್ಯಮಂತ್ರಿ ಪರ ಒಲವು ತೋರಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಮಹಾರಾಷ್ಟ್ರದಲ್ಲಿ ಅಲ್ಲಿನ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಗಳನ್ನು ಶೇ.35ರಷ್ಟು ಜನರು ಶ್ಲಾಘಿಸಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಲವು ಸವಾಲುಗಳ ನಡುವೆ ಈ ಮಹಾಮಾರಿಯನ್ನು ನಿಯಂತ್ರಿಸಲು ಅವಿರತ ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕೇಂದ್ರದ ವಿರುದ್ಧ ಸದಾ ಸಮರಕ್ಕಿಳಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅತ್ಯಂತ ಕಡಿಮೆ ಸ್ಥಾನ ಸಿಕ್ಕಿದೆ.

ದೇಶದಲ್ಲೇ ಕೊರೊನಾ ನಿಯಂತ್ರಿಸುವಲ್ಲಿ ಮುಖ್ಯಮಂತ್ರಿಗಳ ಪೈಕಿ ಮಮತಾ ಬ್ಯಾನರ್ಜಿ ಸಂಪೂರ್ಣವಾಗಿ ವಿಫಲರಾಗಿದ್ದು, ಕೇವಲ ಶೇ. 6ರಷ್ಟು ಜನರು ಮಾತ್ರ ಬೆಂಬಲ ಸೂಚಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವ ಬದಲು ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ಟೀಕೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದ ರಮೇಶ ಜಾರಕಿಹೊಳಿ,ಯತ್ನಾಳ,ಬೆಳಗ್ಗೆ 11.30ಕ್ಕೆ ಪತ್ರಿಕಾಗೋಷ್ಠಿ

Spread the loveಬೆಂಗಳೂರು : ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಮುಖಂಡರು ಶುಕ್ರವಾರ ಪತ್ರಿಕಾಗೋಷ್ಠಿ ಕರೆದಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ