ಬೆಳಗಾವಿ: ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಮನೆ ಸೇರಿದ್ದ 60 ವರ್ಷದ ವೃದ್ಧನಲ್ಲಿ ಮತ್ತೆ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಎರಡಲೇ ಅಲೆ ಆರಂಭಗೊಳ್ತಾ ಅನ್ನೋ ಆತಂಕ ಶುರುವಾಗಿದೆ
ಕುಡುಚಿ ಪಟ್ಟಣದ 60 ವರ್ಷದ ವೃದ್ಧ (ರೋಗಿ 298) 10 ದಿನಗಳ ಹಿಂದೆ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದರು. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ ವೃದ್ಧನಿಗೆ ಸೋಂಕು ಕಾಣಿಸಿಕೊಂಡಿರೋದು ದೃಢವಾಗಿದೆ. ಇದೀಗ ಮತ್ತೆ ವೃದ್ಧನನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೃದ್ಧನಿಗೆ 45 ವರ್ಷದ ವ್ಯಕ್ತಿಯಿಂದ (ರೋಗಿ 245) ಸೋಂಕು ತಗುಲಿತ್ತು. ವೃದ್ಧ ಮತ್ತು ರೋಗಿ 245 ತಬ್ಲಿಘಿಗಳಾಗಿದ್ದು, ದೆಹಲಿಯಿಂದ ಹಿಂದಿರುಗಿದ್ದರು. ಇಂದು ರಾಜ್ಯದಲ್ಲಿ ಒಟ್ಟು 14 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ.