Breaking News

ಮುನಿರತ್ನ ನೇತೃತ್ವದಲ್ಲಿ ಸೇವಾ ಕಾರ್ಯ- ಮೆಚ್ಚುಗೆ ವ್ಯಕ್ತಪಡಿಸಿದ ಜನ………

Spread the love

ಬೆಂಗಳೂರು: ಕೊರೊನಾದಿಂದ ತತ್ತರಿಸಿ ಹೋಗಿರೋ ಅಸಹಾಯಕರ ಸಂಕಷ್ಟಕ್ಕೆ ಬಿಜೆಪಿ ಮುಖಂಡ ಮುನಿರತ್ನ ಹಗಲಿರುಳು ಸ್ಪಂದಿಸುತ್ತಿದ್ದಾರೆ.

ರಾಜರಾಜೇಶ್ವರಿ ನಗರದ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿನಿತ್ಯ ತಮ್ಮ ಕೈಲಾದ ಸೇವೆ ಮಾಡುತ್ತಾ ಇದ್ದಾರೆ. ಇಂದು ಕೊಟ್ಟಿಗೆ ಪಾಳ್ಯ ವಾರ್ಡ್ ನಂಬರ್ 73ರಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿಗೆ ಅಗತ್ಯ ದಿನಸಿ ವಸ್ತುಗಳನ್ನು ವಿತರಣೆ ಯೋಜನೆಗೆ ಚಾಲನೆ ನೀಡಿದ್ರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‍ಕುಮಾರ್ ಜೊತೆಗಿದ್ದರು. ಮುನಿರತ್ನ ನೇತೃತ್ವದಲ್ಲಿ ನಡೆಯುತ್ತಿರೋ ಈ ಸೇವಾ ಕಾರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತವಾಗ್ತಿದೆ.

ಇಂದಿನ ದಿನಸಿ ವಿತರಣಾ ಕಾರ್ಯಕ್ರಮದಲ್ಲಿ ಬೆಂಗಳೂರು ಬಿಜೆಪಿ ಸಂಘಟನಾ ಕಾರ್ಯದರ್ಶಿ ದಶರಥ್, ಬೆಂಗಳೂರು ಕೇಂದ್ರದ ಬಿಜೆಪಿ ಅಧ್ಯಕ್ಷ ಮಂಜುನಾಥ್, ಸ್ಥಳೀಯ ಕಾರ್ಪೋರೇಟರ್ ಮೋಹನ್ ಕುಮಾರ್ ಉಪಸ್ಥಿತರಿದ್ರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ