Breaking News

ದಬ್ಬಾಳಿಕೆಯಿಂದ ಚೀನಾದವರು ನಮ್ಮ ದೇಶವನ್ನು ಬಗ್ಗು ಬಡಿಯಲಾಗಲ್ಲ: ಎಚ್‍ಡಿಕೆ

Spread the love

ಬೆಂಗಳೂರು: ಭಾರತ ಹಾಗೂ ಚೀನಾ ನಡುವೆ ಯುದ್ಧ ಸಂಘರ್ಷವಾಗಿದ್ದು, ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭಾರತ ಹಾಗೂ ಚೀನಾ ನಡುವಿನ ಸಂಘರ್ಷ ದುರದೃಷ್ಟಕರ ವಿಚಾರವಾಗಿದೆ. ಈಗಾಗಲೇ ದೇಶದಲ್ಲಿ ಕೋವಿಡ್ 19 ಸಮಸ್ಯೆಗಳಿಂದ ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಈ ವೇಳೆ ನಮ್ಮ ದೇಶ ಮತ್ತು ಚೀನಾ ದೇಶದ ನಡುವೆ ಸಂಘರ್ಷ ನಡೆಯುವಂತ ವಾತಾವರಣ ನಿರ್ಮಾಣವಾಗಿದೆ. ಇದು ಇಡೀ ವಿಶ್ವ ಹಾಗೂ ಎರಡು ದೇಶಗಳಿಗೂ ಉತ್ತಮ ಬೆಳವಣಿಗೆ ಅಲ್ಲ ಎಂದರು.

ಭಾರತ ಹಾಗೂ ಚೀನಾ ಎರಡು ದೇಶದ ಪ್ರಧಾನಮಂತ್ರಿಗಳಿಗೆ  ನಾನು ಮನವಿ ಮಾಡುತ್ತೇನೆ. ಅದೇನೆಂದರೆ ಇಂತಹ ಸನ್ನಿವೇಶದಲ್ಲಿ ಪರಸ್ಪರ ಅವಿಶ್ವಾಸದ ಹಿನ್ನೆಲೆಯಲ್ಲಿ ಅಥವಾ ಬೇರೆ ಬೇರೆ ಕಾರಣದಿಂದ ಯುದ್ಧದ ವಾತಾವರಣ ನಿರ್ಮಾಣ ಮಾಡುವುದು ಬೇಡ. ಇದರಿಂದ ಒಂದು ಕಡೆ ಅಮಾಯಕ ಯೋಧರ ಬಲಿಯಾಗುತ್ತಿದ್ದಾರೆ. ಮತ್ತೊಂದು ಕಡೆ ಎರಡು ದೇಶಗಳ ನಡುವಿನ ಸಾಮರಸ್ಯ ಹಾಳುಮಾಡುವುದು ಬೇಡ ಎಂದು ಮನವಿ ಮಾಡಿಕೊಂಡರು.

45 ವರ್ಷಗಳ ನಂತರ ಯುದ್ಧದ ವಾತಾವರಣ ಮೊದಲ ಬಾರಿಗೆ ಆಗಿದೆ. 1967ರ ಯುದ್ಧದ ನಂತರ ಎರಡು ದೇಶಗಳ ನಡುವೆ ಸಾಮರಸ್ಯ ಇರಲಿಲ್ಲ. 35 ವರ್ಷಗಳ ನಂತರ ಚೀನಾದ ಪ್ರಧಾನಿ ದೆಹಲಿಗೆ ಬಂದಿದ್ದು ದೇವೇಗೌಡರು ಪ್ರಧಾನಿ ಆದಾಗ. ಮೊದಲನೇ ಬಾರಿಗೆ ಎಚ್.ಡಿ. ದೇವೇಗೌಡರು ಪ್ರಧಾನಿ ಆದಾಗ ಒಪ್ಪಂದ ಆಗಿದೆ. ಆದರೆ ಅಂದು ದೊಡ್ಡ ಮಟ್ಟದ ಪ್ರಚಾರ ಸಿಗಲಿಲ್ಲ. ಕನ್ನಡಿಗ ಪ್ರಧಾನಿ ಪ್ರಚಾರ ಪಡೆಯದೆ, ದೇಶವನ್ನು ರಕ್ಷಣೆ ಮಾಡುವಲ್ಲಿ ಮಾಡಿದ ಕೆಲಸ ನೆನೆಪಿಸಿಕೊಳ್ಳುವ ಕೆಲಸ ಯಾರೂ ಮಾಡಿಲ್ಲ. ಆದರೆ ಅದು ಇತಿಹಾಸ, ಆಗ ನಾನು ಎಂಪಿ ಆಗಿದ್ದೆ ಎಂದು ಹೇಳಿದರು.


Spread the love

About Laxminews 24x7

Check Also

ನನಗೆ ಸಚಿವ ಸ್ಥಾನ ಕೊಡಲೇಬೇಕು:ಎಸ್​ಎನ್ ಸುಬ್ಬಾರೆಡ್ಡಿ

Spread the loveಡಿಸೆಂಬರ್ 6: ನನಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್​ಎನ್ ಸುಬ್ಬಾರೆಡ್ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ