Breaking News
Home / ಜಿಲ್ಲೆ / ಇನ್ನು ಕೆಲವು ರಾಜ್ಯಗಳ ಗಡಿ ಬಂದ್ ಮಾಡಲು ಮುಂದಾದ ರಾಜ್ಯ ಸರ್ಕಾರ ……….

ಇನ್ನು ಕೆಲವು ರಾಜ್ಯಗಳ ಗಡಿ ಬಂದ್ ಮಾಡಲು ಮುಂದಾದ ರಾಜ್ಯ ಸರ್ಕಾರ ……….

Spread the love

ಬೆಂಗಳೂರು, ಮೇ 20- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆಸ್ಪೋಟಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇನ್ನು ಕೆಲವು ರಾಜ್ಯಗಳ ಪ್ರವೇಶಕ್ಕೆ ನಿರ್ಬಂಧ ಹಾಕಲು ಮುಂದಾಗಿದೆ.

ಈಗಾಗಲೇ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ಮತ್ತು ಕೇರಳ ರಾಜ್ಯಗಳ ಪ್ರವೇಶಕ್ಕೆ ಕರ್ನಾಟಕದಲ್ಲಿ ನಿರ್ಬಂಧವಿಧಿಸಲಾಗಿದೆ. ಈ ರಾಜ್ಯಗಳಿಂದ ಯಾರೇ ಬಂದರೂ ಕಡ್ಡಾಯವಾಗಿ ಕ್ವಾರಂಟೈನ್ ಒಳಗಾಗಬೇಕೆಂದು ಸೂಚನೆ ಕೊಡಲಾಗಿದೆ.

ಇದರ ನಡುವೆ ಸೋಂಕು ಹೆಚ್ಚಿರುವ ಕೆಲ ರಾಜ್ಯಗಳಿಗೆ ಕರ್ನಾಟಕದಲ್ಲಿ ಕೆಲ ದಿನಗಳ ಮಟ್ಟಿಗೆ ಪ್ರವೇಶ ನೀಡದಿರಲು ಸರ್ಕಾರ ತೀರ್ಮಾನಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರಪ್ರದೇಶ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ, ಪಂಜಾಬ್, ತೆಲಂಗಾಣ ಸೇರಿದಂತೆ ಮತ್ತಿತರ ರಾಜ್ಯಗಳ ಪ್ರವೇಶಕ್ಕೆ ನಿರ್ಬಂಧ ಹಾಕುವುದು ಬಹುತೇಕ ಖಚಿತವಾಗಿದೆ.

ಈ ರಾಜ್ಯಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿರುವುದರಿಂದ ಸರ್ಕಾರ ನಿರ್ಬಂಧ ಹಾಕಲು ಚಿಂತನೆ ನಡೆಸಿದೆ. ಒಂದೆರಡು ದಿನಗಳಲ್ಲಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಲಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಹೊರ ರಾಜ್ಯ, ಹೊರದೇಶದಿಂದ ಆಗಮನ ಹೆಚ್ಚಳ ಹಾಗೂ ಸೋಂಕು ಪರೀಕ್ಷಾ ಪ್ರಮಾಣ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಇನ್ನು ಮುಂದೆ ಇದೇ ರೀತಿ ದಿನಕ್ಕೆ 100, 200ರ ರೀತಿಯಲ್ಲಿ ಸೋಂಕು ಪ್ರಕರಣಗಳು ಹೆಚ್ಚುವ ಭೀತಿ ಸೃಷ್ಟಿಯಾಗಿದೆ.

ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ನಡುವಲ್ಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಇದೀಗ ಮತ್ತಷ್ಟು ಹೊರ ರಾಜ್ಯ ಹಾಗೂ ಹೊರ ದೇಶಗಳ ಪ್ರಯಾಣದ ಮೇಲೆ ಮತ್ತಷ್ಟು ನಿರ್ಬಂಧ ಹೇರಲು ಚಿಂತನೆ ನಡೆಸುತ್ತಿದೆ ಎಂದು ವರದಿಗಳಿಂದ ತಿಳಿದಬಂದಿದೆ.

ಮಹಾರಾಷ್ಟ್ರದಲ್ಲಿ 35,058 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ತಮಿಳುನಾಡು 11,760, ಗುಜರಾತ್ 11,745 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅತೀ ಹೆಚ್ಚು ಸೋಂಕಿತರನ್ನು ಒಳಗೊಂಡಿರುವ ರಾಜ್ಯಗಳ ಪ್ರಯಾಣದ ಮೇಲೆ ನಿರ್ಬಂಧ ಹೇರಲಾಗಿದೆ.

ಇತರೆ ರಾಜ್ಯಗಳಿಂದ ಹಿಂತಿರುವವರಿಂದಲೇ ಅತೀ ಹೆಚ್ಚು ಸೋಂಕು ಪತ್ತೆಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಮತ್ತಷ್ಟು ರಾಜ್ಯಗಳ ಪ್ರಯಾಣದ ಮೇಲೆ ನಿರ್ಬಂಧ ಹೇರಲು ಚಿಂತನೆ ನಡೆಸಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ