Breaking News

ಕೊರೊನಾ ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖವಾಗಿದ್ದು, ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್

Spread the love

ಬಳ್ಳಾರಿ: ಕೊರೊನಾ ಸೋಂಕು ತಗುಲಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖವಾಗಿದ್ದು, ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲೆಯಲ್ಲಿ ಮತ್ತೋರ್ವ ಗುಣಮುಖನಾದ ಹಿನ್ನೆಲೆ ಕೋವಿಡ್-19 ಜಿಲ್ಲಾಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಈ ಮೂಲಕ ಕೊರೊನಾದಿಂದ ಗುಣಮುಖರಾದವರ ಸಂಖ್ಯೆ 16ಕ್ಕೇರಿದೆ. ಪ್ರಸ್ತುತ 20 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಪ್ಲಿಯ ಮಾರುತಿನಗರ ನಿವಾಸಿ 34 ವರ್ಷದ ರೋಗಿ ನಂ.863 ಡಿಸ್ಚಾರ್ಜ್ ಆಗಿದ್ದಾರೆ. ಇವರು ಬೆಂಗಳೂರಿನಿಂದ ಆಗಮಿಸಿದ್ದರು.

ಇವರು ಕೇವಲ 16 ದಿನಗಳಲ್ಲಿ ಗುಣಮುಖರಾಗಿ ಬಿಡುಗಡೆಯಾಗುತ್ತಿರುವುದು ಸಂತೋಷ ತಂದಿದೆ ಎಂದು ವೈದ್ಯರು ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗುಣಮುಖರಾಗಿ ಹೊರಬಂದ ರೋಗಿ ನಂ.863 ಮಾತನಾಡಿ, ಆಸ್ಪತ್ರೆಗೆ ದಾಖಲಾಗಿ ಬಂದಾಗಿನಿಂದ ಇಲ್ಲಿಯವರೆಗೆ ಚೆನ್ನಾಗಿ ನೋಡಿಕೊಂಡರು. ಸಮರ್ಪಕ ಚಿಕಿತ್ಸೆ ನೀಡಿ, ಧೈರ್ಯ ತುಂಬಿದರು. ವೈದ್ಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಯ ಋಣ ಮರೆಯುವುದಿಲ್ಲ ಎಂದರು.

ಈ ವೇಳೆ ಕೋವಿಡ್-19 ನೋಡಲ್ ಅಧಿಕಾರಿ ಡಾ.ಯೋಗಾನಂದರೆಡ್ಡಿ, ಆರ್.ಎಂ.ಒ ಡಾ.ಮಲ್ಲಿಕಾರ್ಜುನ, ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ, ಡಾ.ಚಿತ್ರಶೇಖರ, ಸುಧಾಕರ್, ಲ್ಯಾಬ್ ಟೆಕ್ನಿಷಿಯನ್ಸ್, ಎಕ್ಸ್-ರೇ, ಡಿ-ಗ್ರೂಪ್ ಸಿಬ್ಬಂದಿ ಸೇರಿದಂತೆ ಆಸ್ಪತ್ರೆಯ ಇತರ ಸಿಬ್ಬಂದಿ ಇದ್ದರು.


Spread the love

About Laxminews 24x7

Check Also

ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗ

Spread the loveಬಳ್ಳಾರಿ, ಡಿಸೆಂಬರ್​ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ