Breaking News

ಬೈಕ್ ಅಪಘಾತ ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ಗುದ್ದಿದ ಬಿಎಂಟಿಸಿ ಬಸ್

Spread the love

ಬೆಂಗಳೂರು: ಬೈಕ್‌ಗೆ  ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ದೇವಸ್ಥಾನಕ್ಕೆ ಬಿಎಂಟಿಸಿ ಬಸ್  ಗುದ್ದಿದ ಘಟನೆ ಬೆಂಗಳೂರಿನ  ಬೃಂದಾವನ ಬಸ್ ನಿಲ್ದಾಣದ ಬಳಿ ನಡೆದಿದೆ.

ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಘಟಕ 9ಕ್ಕೆ ಸೇರಿದ ಬಿಎಂಟಿಸಿ ಬಸ್ 8ನೇ ಮೈಲಿಯಿಂದ ಹೇರೋಹಳ್ಳಿ ಕ್ರಾಸ್‌ಗೆ ತೆರಳುತ್ತಿದ್ದಾಗ ಏಕಾಏಕಿ ಎದುರಿನಿಂದ ಬೈಕ್ ಬಂದಿದೆ. ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಶಿವ ದೇಗುಲಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ ಪರಿಣಾಮ ಶಿವನ ದೇಗುಲದ ಕಾಂಪೌಂಡ್ ಹಾಗೂ ಗ್ರಿಲ್‌ಗೆ ಹಾನಿಯಾಗಿದೆ. ಅಪಘಾತದಿಂದ ಬೈಕ್ ಸವಾರನ ಬಲಗೈಗೆ ತರಚಿದ ಗಾಯಗಳಾಗಿದೆ. ಬಸ್ ಚಾಲಕ ಹಾಗೂ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ