Breaking News
Home / ಜಿಲ್ಲೆ / ಬಿಎಂಟಿಸಿ ಮೇಲಾಧಿಕಾರಿಗಳಿಂದ ಕಿರುಕುಳ -ಚಾಲಕ ಕಮ್ ನಿರ್ವಾಹಕ ರಾಜೀನಾಮೆಗೆ ನಿರ್ಧಾ

ಬಿಎಂಟಿಸಿ ಮೇಲಾಧಿಕಾರಿಗಳಿಂದ ಕಿರುಕುಳ -ಚಾಲಕ ಕಮ್ ನಿರ್ವಾಹಕ ರಾಜೀನಾಮೆಗೆ ನಿರ್ಧಾ

Spread the love

ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ ಚಾಲಕ- ನಿರ್ವಾಹಕರಿಗೆ ಕಿರುಕುಳ ಹೆಚ್ಚಾಗಿದೆ ಎನ್ನುವುದಕ್ಕೆ ಘಟನೆಯೊಂದು ಬೆಳಕಿಗೆ ಬಂದಿದೆ.

ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಡ್ರೈವರ್ ಕಮ್ ಕಂಡೆಕ್ಟರ್ ಆಗಿರುವ ಪುಂಡಲಿಕ ಹನುಮಂತ ಉಮರಾಣಿ ಸ್ವ-ಇಚ್ಛೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ. ಡಿಪೋ 32ರಲ್ಲಿ ಬಿಎಂಟಿಸಿಯ ಚಾಲಕ ಹಾಗೂ ನಿರ್ವಾಹಕರಾಗಿರುವ ಪುಂಡಲಿಕ ಹನುಮಂತ ಉಮರಾಣಿ, ಇದೇ ತಿಂಗಳ 15ರಂದು ಬನಶಂಕರಿ- ಅತ್ತಿಬೆಲೆ ಮಾರ್ಗದಲ್ಲಿ ಕಂಡೆಕ್ಟರ್ ಆಗಿ ಕರ್ತವ್ಯದಲ್ಲಿ ಇದ್ದರು.

ಕರ್ತವ್ಯದಲ್ಲಿ ಇದ್ದಾಗ, ಟಿಕೆಟ್ ತನಿಖಾಧಿಕಾರಿ ಗಂಗಮ್ಮ ತಲವಾರ್ ಎಂಬುವವರು ಕೇಸ್ ಹಾಕಿದ್ದರು ಎನ್ನಲಾಗಿದೆ. ನನ್ನ ಮೇಲೆ ಕೇಸ್ ಹಾಕಿದ್ದಕ್ಕೆ ಡಿಪೋದಲ್ಲಿ ಅಧಿಕಾರಿಗಳು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ನಾನು ಕರ್ತವ್ಯದಲ್ಲಿ ಇದ್ದಾಗ ಕಳ್ಳನ ಹಾಗೇ ನೋಡಿ ಅವಮಾನ ಮಾಡಿದ್ದಾರೆ. ಈ ಅವಮಾನಕ್ಕೆ ಆತ್ಮಹತ್ಯೆ ಮಾಡಿಕೊಳ್ಳೋದಾ ಎಂದು ಒಮ್ಮೊಮ್ಮೆ ಎನಿಸುತ್ತೆ ಎಂದು ನಿರ್ವಾಹಕ ಭಾವುಕರಾಗಿ ಮಾತನಾಡಿದರು.

ಇಂದು ಫ್ರೀಡಂಪಾರ್ಕ್ ರಸ್ತೆಯಲ್ಲಿ ಸಾರಿಗೆ ನೌಕರರ ಪ್ರತಿಭಟನೆಗೆ ಬಂದಿದ್ದ ನಿರ್ವಾಹಕ ಪುಂಡಲೀಕ ಹನುಮಂತ ನೇರವಾಗಿ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರಿಗೆ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.


Spread the love

About Laxminews 24x7

Check Also

ವನ್ಯಜೀವಿಗಳ ದಾಹ ತೀರಿಸುವ ಕೃತಕ ನೀರಿನ ತೊಟ್ಟಿಗಳು

Spread the loveಹಾನಗಲ್: ಕಡು ಬೇಸಿಗೆ ನಾಡಿನೆಲ್ಲೆಡೆ ಕುಡಿಯುವ ನೀರಿಗೆ ಅಭಾವ ಸೃಷ್ಟಿಸಿದೆ. ಕಾಡಿನಲ್ಲಿ ವನ್ಯ ಜೀವಿಗಳು ಅನುಭವಿಸುತ್ತಿರುವ ಸಂಕಷ್ಟ ಅರಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ