Breaking News

ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

Spread the love

ಬೆಂಗಳೂರು: ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನ ಮುಂದಿನ ಸೀಟಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಬುಲೆಟ್ ಕೂಡ ಸಿಕ್ಕಿದೆ.

ನಿನ್ನೆ ರಾತ್ರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನಾ ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳದಲ್ಲಿ ಸಿಕ್ಕಿರುವ ಬುಲೆಟ್ ಸೇರಿದಂತೆ ಹಲವು ಸಾಕ್ಷ್ಯಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಶಾರ್ಟ್ ಸರ್ಕ್ಯೂಟ್‌ನಿಂದ ಆಟೋಮೊಬೈಲ್ ಗ್ಯಾರೇಜ್‌ಗೆ ಬೆಂಕಿ; ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

Spread the loveಕಲಬುರಗಿ: ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಆಟೋಮೊಬೈಲ್ ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲಬುರಗಿ ಜಿಲ್ಲೆಯ  ಅಫಜಲಪುರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ