Breaking News

ಬೈಕ್‌ ಸಮೇತ ಸುಟ್ಟು ಕರಕಲಾದ ಯುವಕನ ಶವ ಪತ್ತೆ – ಕೊಲೆ ಶಂಕೆ

Spread the love

ಆನೇಕಲ್: ಸರ್ಜಾಪುರ ಸಮೀಪದ ಬಿಕ್ಕನಹಳ್ಳಿ ರಸ್ತೆಯಲ್ಲಿ ಬೈಕ್ ಜೊತೆಗೆ ಸುಟ್ಟು ಕರಕಲಾದ ಯುವಕನ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಪ್ರತಿಷ್ಠಿತ ಅಜೀಂ ಪ್ರೇಮ್ ಜೀ ಕಾಲೇಜಿನ ರಸ್ತೆಯಲ್ಲಿ ಮೃತದೇಹ ಪತ್ತೆಯಾಗಿದೆ. ಸುಮಾರು 20 ರಿಂದ 25 ವರ್ಷ ವಯಸ್ಸಿನ ಯುವಕನ ಮೃತದೇಹ ಇದಾಗಿದ್ದು, ಕಾಲೇಜು ವಿದ್ಯಾರ್ಥಿ ಇರಬಹುದು ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

ರಸ್ತೆ ಬದಿಯಲ್ಲಿ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ ಜನರು. ಸ್ಥಳಕ್ಕೆ ಹೋಗಿ ನೋಡಿ, ಶವ ಪತ್ತೆಯಾದ ಬಗ್ಗೆ ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಡಿಷನಲ್ ಎಸ್‌ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸೋಕೋ ಟೀಂ, ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಈ ಸಂಬಂಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ