Breaking News

ಸಿಎಂ ಡಿಕೆಶಿ ಮನೆ, ವಿಧಾನಸೌಧಕ್ಕೆ ಬಾಂಬ್‌ ಬೆದರಿಕೆ – ಆರೋಪಿ ಕಾರ್ತಿಕ್‌ ಅರೆಸ್ಟ್‌

Spread the love

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್  ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಹಾಕಿ ಕರೆ ಮಾಡಿದ್ದ ಆರೋಪಿಯನ್ನ ಪೊಲೀಸ್ರು ಬಂಧಿಸಿದ್ದಾರೆ.

ಕಾರ್ತಿಕ್‌ ಬಂಧಿತ ಆರೋಪಿ. ಕಳೆದ 7ನೇ ತಾರೀಖಿನಂದು ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕನ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಕಾರ್ತಿಕ್‌ನನ್ನ ಸದಾಶಿವನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಪೋಷಕರಿಂದ ದೂರವಾಗಿ ಮನೆಯಿಂದ ಹೊರಗುಳಿದಿದ್ದ ಕಾರ್ತಿಕ್, ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದನು ಎನ್ನಲಾಗಿದೆ. ಈ ಹಿಂದೆಯೂ ಹಲವು ಬೆದರಿಕೆ ಕರೆ ಮಾಡಿರೋದು ಬೆಳಕಿಗೆ ಬಂದಿದೆ. ಆಟೋ ಚಾಲಕ ಭಗವಂತಪ್ಪ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಕಾರ್ತಿಕ್‌ನನ್ನ ಬಂಧಿಸಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕುರುಕಲು ತಿಂಡಿ ಪೊಟ್ಟಣದಲ್ಲಿದ್ದ ಆಟಿಕೆ ನುಂಗಿ ಮಗು ಸಾವು

Spread the loveದಾವಣಗೆರೆ: ಕುರುಕಲು ತಿಂಡಿ ಪೊಟ್ಟಣದಲ್ಲಿದ್ದ ಆಟಿಕೆ ನುಂಗಿ 4 ವರ್ಷದ ಮಗು  ಸಾವನ್ನಪ್ಪಿದ ಘಟನೆ ಚನ್ನಗಿರಿ  ಪಟ್ಟಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ