Breaking News
Home / ಜಿಲ್ಲೆ / ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ

ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ: ಬೊಮ್ಮಾಯಿ

Spread the love

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದರಾಯನಪುರದಲ್ಲಿ ನಡೆದ ಘಟನೆ ಬಗ್ಗೆ ಕಠಿಒಣ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆಮಾತನಾಡಿದ ಅವರು, ಘಟನೆ ಸಂಬಂಧ ಈಗಾಗಲೇ 60 ಜನರನ್ನ ಬಂಧನ ಮಾಡಲಾಗಿದೆ. ಘಟನೆಯಾದ 3-4 ಗಂಟೆಯಲ್ಲಿ ಎಲ್ಲಾ ಪ್ರಮುಖರನ್ನ ಅರೆಸ್ಟ್ ಮಾಡಿದ್ದೇವೆ. ಪಾದರಾಯನಪುರದ ಘಟನೆ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇವೆ ಎಂದರು.

ಪೊಲೀಸರು, ಆರೋಗ್ಯ ಇಲಾಖೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಕ್ಕೆ ಕಾರ್ಯಾಚರಣೆ ಮಾಡಿದ್ದೇವೆ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸಿಎಂ ಪೊಲೀಸರಿಗೆ ಫ್ರೀ ಹ್ಯಾಂಟ್ ಕೊಟ್ಟಿದ್ದಾರೆ. ಹೀಗಾಗಿ ರಾತ್ರೋ ರಾತ್ರಿ ಕಾರ್ಯಾಚರಣೆ ಮಾಡಿದ್ದೇವೆ. ಇನ್ನೂ ಕಾರ್ಯಾಚರಣೆ ನಡೆದಿದೆ. ಎಲ್ಲರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಗೃಹ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಘಟನೆಯೇನು?:
ಭಾನುವಾರ ರಾತ್ರಿ ಗುಂಪು ಗುಂಪಾಗಿ ಕರ್ತವ್ಯ ನಿರತ ಪೊಲೀಸರ ಮೇಲೆ ಪಾದರಾಯನಪುರದ ಪುಂಡರು ಹಲ್ಲೆ ನಡೆಸಿದ್ದರು. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಚೆಕ್‍ಪೋಸ್ಟ್ ಧ್ವಂಸಗೊಳಿಸಿದ್ದರು. ಸ್ಥಳದಲ್ಲಿ ಕೆಲ ಪೊಲೀಸರು ಇದಿದ್ದರಿಂದ ಪುಂಡರ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಕೊರೊನಾ ಸೋಂಕಿತರ ಹೆಚ್ಚು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾದರಾಯನಪುರವನ್ನು ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲಾಗಿತ್ತು. ಪಾದರಾಯನಪುರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಿ, ಪ್ರಮುಖ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಭಾನುವಾರ ಕೊರೊನಾ ಶಂಕಿತ 58 ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಪುಂಡರ ಜೀವ ರಕ್ಷಣೆಗೆ ಬಂದವರ ಮೇಲೆಯೇ ದಾಳಿ ನಡೆಸಿದ್ದಾರೆ. ಘಟನೆ ವಿಕೋಪ ತಿರುಗುತ್ತಿದ್ದಂತೆ ಪಾದರಾಯನಪುರಕ್ಕೆ ಪೊಲೀಸರ ನಿಯೋಗವೇ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಕರ್ತವ್ಯನಿರತ ಸಿಬ್ಬಂದಿ ಮೇಲೆ ದಾಳಿಗೆ ಯತ್ನಿಸಿದ ಸುಮಾರು 50 ಜನರನ್ನು ರಾತ್ರಿಯೇ ಪೊಲೀಸರು ಬಂಧಿಸಿ ಆಡುಗೋಡಿ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ.


Spread the love

About Laxminews 24x7

Check Also

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ

Spread the loveಬೆಂಗಳೂರು: ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಸಿಸಿಬಿ ಅಧಿಕಾರಿಗಳು ಡ್ರಗ್ಸ್​​ ಕೇಸ್​ನಲ್ಲಿ ಅತೀದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಇದುವರೆಗೆ ಡ್ರಗ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ