Breaking News
Home / new delhi / ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆಗೆ ಸಹಕಾರ: ಸಿಎಂ

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆಗೆ ಸಹಕಾರ: ಸಿಎಂ

Spread the love

ಬೆಂಗಳೂರು: ಚೆನ್ನೈನಲ್ಲಿರುವ ಅಮೆರಿಕ ದೂತಾವಾಸದ ಕಾನ್ಸಲ್ ಜನರಲ್ ಜ್ಯುಡಿತ್ ರೇವಿನ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಂಗಳವಾರ ವರ್ಚುಯಲ್ ಸಭೆ ನಡೆಸಿದರು.

ಬೆಂಗಳೂರಿನಲ್ಲಿ ಅಮೆರಿಕದ ರಾಯಭಾರ ಕಚೇರಿ ತೆರೆಯಬೇಕೆನ್ನುವುದು ನಮ್ಮ ಬಹು ದಿನಗಳ ಬೇಡಿಕೆಯಾಗಿದ್ದು, ಕಚೇರಿಯ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ಯಡಿಯೂರಪ್ಪ ತಿಳಿಸಿದರು.

ಭಾರತದಲ್ಲಿರುವ 100 ಅಮೆರಿಕಾ ಸಂಸ್ಥೆಗಳ ಪೈಕಿ ಸಿಸ್ಕೋ, ಐಬಿಎಂ, ಇಂಟೆಲ್, ಜಿಇ, ಎಚ್ಪಿ, ಒರಾಕಲ್, ಯುಟಿಸಿ ಸೇರಿದಂತೆ 90 ಕಂಪನಿಗಳು ಬೆಂಗಳೂರಿನಲ್ಲಿಯೇ ನೆಲೆಸಿವೆ ಎಂದು ಮುಖ್ಯಮಂತ್ರಿ ತಿಳಿಸಿದರು. ಕರ್ನಾಟಕ ಬಂಡವಾಳ ಸ್ನೇಹಿ ರಾಜ್ಯವಾಗಿದ್ದು, ಅಮೆರಿಕದಿಂದ ಹೆಚ್ಚಿನ ಬಂಡವಾಳವನ್ನು ಸ್ವಾಗತಿಸುತ್ತೇವೆ ಎಂದರು.

ನವೋದ್ಯಮ ಶ್ರೇಯಾಂಕದಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದಿರುವುದಕ್ಕೆ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ಕಾನ್ಸಲ್ ಜನರಲ್ ಜ್ಯುಡಿತ್ ರೇವಿನ್, ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಸಹಯೋಗ, ಆರ್ಥಿಕ ವ್ಯವಹಾರಗಳ ವಿಸ್ತರಣೆ, ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಗಳು, ಸಂಶೋಧನೆ, ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಸೇವೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾಯಣ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗೌರವ್ ಗುಪ್ತ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಉಚಿತ ಭಾಗ್ಯ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿ

Spread the love Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ