Breaking News

ಧಾರವಾಡದ ಹೆಸರು-ಉದ್ದು ಖರೀದಿಗೆ ಕೇಂದ್ರ ಗ್ರೀನ್ ಸಿಗ್ನಲ್

Spread the love

ನವದೆಹಲಿ,  – ಧಾರವಾಡ ಜಿಲ್ಲಾಯ ರೈತರ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಧಾರವಾಡ ಜಿಲ್ಲಾಯಲ್ಲಿ ಖರೀದಿ ಕೇಂದ್ರಗಳ ಮೂಲಕ ಹೆಸರುಕಾಳು ಹಾಗೂ ಉದ್ದು ಖರೀದಿಯನ್ನು ಕೂಡಲೇ ಆರಂಭಿಸಲು ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಈ ಬಗ್ಗೆ ಆದೇಶ ಪ್ರತಿ ಹೊರಡಿಸಿದ್ದು , ರೈತರಿಗೆ ಸಂತಸ ತಂದಿದೆ.

ಈ ವಿಷಯವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದು ಜಿಲ್ಲಾಯ ರೈತರು ಇದರ ಸದುಪಯೋಗ ಪಡೆಯಬೇಕೆಂದು ಕೋರಿದ್ದಾರೆ. ಶುಕ್ರವಾರದಿಂದ ನೋಂದಣಿ ಕಾರ್ಯ ಆರಂಭವಾಗಿದ್ದು, ಹೆಸರು ಮತ್ತು ಉದ್ದು ಖರೀದಿ ಕೇಂದ್ರ ತೆರೆಯಬೇಕು ಎಂದು ಕ್ಷೇತ್ರದ ರೈತರಿಂದ ಬಹಳ ಬೇಡಿಕೆ ಬಂದಿತ್ತು.

ಈ ವಿಚಾರವಾಗಿ ಕೇಂದ್ರ ಕೃಷಿ ಸಚಿವರಲ್ಲಿ ಮನವಿ ಮಾಡಿ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿದ್ದರ ಪರಿಣಾಮವಾಗಿ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಖರೀದಿ ಕೇಂದ್ರ ತೆರೆಯಲು ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ.

ಶುಕ್ರವಾರದಿಂದ ನೋಂದಣಿ ಕಾರ್ಯ ಆರಂಭವಾಗಿದೆ. ಆ ಮೂಲಕ ರೈತರು ಬೆಳೆದ ಹೆಸರು ಕಾಳು ಹಾಗೂ ಉದ್ದನ್ನು ಸರ್ಕಾರ ಬೆಂಬಲ ಬೆಲೆಯಡಿ ಖರೀದಿ ಮಾಡಲಿದೆ ಎಂದು ಜೋಶಿ ತಿಳಿಸಿದ್ದಾರೆ. ಹೆಸರು ಕಾಳಿಗೆ ಕ್ವೀನ್ಟಾಲ್ ಗೆ 7,196 ರೂ. ಗಳಂತೆ ಪ್ರತಿ ಎಕರೆಗೆ 4 ಕ್ವಿಂಟಾಲ್ ಹಾಗೂ ಉದ್ದು ಬೇಳೆಯನ್ನು 6000 ರೂ ನಂತೆ ಪ್ರತಿ ಎಕರೆಗೆ 3 ಕ್ವಿಂಟಾಲ್, ಗರಿಷ್ಠ 6 ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.

ಧಾರವಾಡ ಜಿಲ್ಲಾಯ ಅಣ್ಣಿಗೇರಿ, ನವಲಗುಂದ ತಾಲೂಕಿನ ಮೊರಬ ಮತ್ತು ಹೆಬ್ಬಾಳದಲ್ಲಿ ಹೆಸರುಕಾಳು ಖರೀದಿ ಕೇಂದ್ರವನ್ನು ಆರಂಭಿಸುವಂತೆ ಆ ಭಾಗದ ರೈತರು ನನಗೆ ಪತ್ರ ಬರೆದು ಒತ್ತಾಯಿಸಿದ್ದರು ಎಂದು ತಿಳಿಸಿರುವ ಸಚಿವ ಜೋಶಿ, ಜಿಲ್ಲಾಯ ವಿವಿಧ ಸ್ಥಳಗಳಲ್ಲಿ ಒಟ್ಟು 11 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ,

ಅಗತ್ಯ ದಾಖಲಾತಿಗಳೊಂದಿಗೆ ಅ.15ರೊಳಗೆ ನೋಂದಣಿ ಮಾಡಿಕೊಳ್ಳಲು ಸಮಯಾವಕಾಶವಿದ್ದು, ಡಿ.15ರ ವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿ ಜಿಲ್ಲಾಯ ರೈತರು ಇದರ ಸದುಪಯೋಗ ಪಡೆಯಬೇಕೆಂದು ಕೋರಿದ್ದಾರೆ. ಮನವಿಗೆ ಶೀಘ್ರ ಸ್ಪಂದಿಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಅಭಿನಂದಿಸುವುದಾಗಿಯೂ ತಿಳಿಸಿದ್ದಾರೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ

Spread the loveಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ