Breaking News

ಗುತ್ತಿಗೆ ಆಧಾರದ NHM ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿಶೇಷ ಹೆಚ್ಚುವರಿ ಭತ್ಯೆ

Spread the love

ಬೆಂಗಳೂರು : ರಾಜ್ಯ ಸರ್ಕಾರವು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ದಡಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 14,252 ವಿವಿಧ ಹುದ್ದೆಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ.

ಆಯುಷ್ ಮತ್ತು ಎಂಬಿಬಿಎಸ್ ವೈದ್ಯರು ಹಾಗೂ ತಜ್ಞರಿಗೆ 10 ಸಾವಿರ ರೂ. ಶುಶ್ರೂಷಕಿಯರಿಗೆ ಎ.ಎನ್. ಎಂ ಲ್ಯಾಬ್ ಟೆಕ್ನೀಷಿಯನ್ ಹಾಗೂ ಫಾರ್ಮಾಸಿಸ್ಟ್ ಗಳಿಗೆ ತಲಾ 5 ಸಾವಿರ ರೂ. ನಂತೆ ಮುಂದಿನ ಆರು ತಿಂಗಳ ಅವಧಿಗೆ ವಿಶೇಷ ಹೆಚ್ಚುವರಿ ಭತ್ಯೆ ಘೋಷಿಸಿದೆ.

ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ಆಯುಷ್ ವೈದ್ಯರು, ಎಂಬಿಬಿಎಸ್ ವೈದ್ಯರು, ಶುಶ್ರೂಷಕಿಯರು, ಎಎನ್‌ಎಂ ಲ್ಯಾಬ್ ಟೆಕ್ನೀಷಿಯನ್ ಹಾಗೂ ಫಾರ್ಮಾಸಿಸ್ಟ್ ಗಳಿಗೆ ವೇತನ ಹೆಚ್ಚಿಸುವ ಕುರಿತು ಆರೋಗ್ಯ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆ ಪರಿಶೀಲಿಸಿದ ರಾಜ್ಯ ಸರ್ಕಾರ ವೇತನ ಹೆಚ್ಚಳದ ಬದಲಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಮುಂದಾಗಿದೆ ಎಂದು ರಾಜ್ಯ ಸರ್ಕಾರದ ಉಪಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ