Breaking News
Home / new delhi / ಕರೊನಾ ಕೇಸ್​: ಸಕ್ರಾ ಸೇರಿ ಐದು ಆಸ್ಪತ್ರೆಗಳ ವಿರದ್ಧ ಎಫ್​ಐಆರ್

ಕರೊನಾ ಕೇಸ್​: ಸಕ್ರಾ ಸೇರಿ ಐದು ಆಸ್ಪತ್ರೆಗಳ ವಿರದ್ಧ ಎಫ್​ಐಆರ್

Spread the love

ಬೆಂಗಳೂರು: ಸರ್ಕಾಋದ ಆದೇಶದಂತೆ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಶೇಕಡ 50 ಹಾಸಿಗೆ ಒದಗಿಸದ ಐದು ಖಾಸಗಿ ಆಸ್ಪತ್ರೆಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ನೃಪತುಂಗಾ ರಸ್ತೆಯಲ್ಲಿರುವ ಸೇಂಟ್ ಮಾರ್ಥಾಸ್ ಆಸ್ಪತ್ರೆ, ಶಂಕರಪುರದ ರಂಗದೊರೆ ಮೆಮೋರಿಯಲ್ ಆಸ್ಪತ್ರೆ, ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆ, ಕನ್ನಿಂಗ್​ಹ್ಯಾಂ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಹಾಗೂ ದೇವರಬೀಸನಹಳ್ಳಿಯ ಸಕ್ರಾ ಆಸ್ಪತ್ರೆ ವಿರುದ್ಧ ದೂರು ದಾಖಲಾಗಿರುವಂಥದ್ದು.

 

ಕರೊನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಮೀಸಲಿರಿಸಿದ ಬೆಡ್​ಗಳ ಕುರಿತು ಐಎಎಸ್ ಅಧಿಕಾರಿಗಳಿಗೆ ಮಾಹಿತಿ ನೀಡಲು ನಿರಾಕರಿಸಿದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮುಖ್ಯಸ್ಥರ ವಿರುದ್ಧ ಮಾರತ್ತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜಿಲ್ಲಾ ಆರೋಗ್ಯ ಅಧಿಕಾರಿ ನಾಗರಾಜ್ ಎಂಬುವರು ಕೊಟ್ಟ ದೂರಿನ ಮೇರೆಗೆ ದೇವರಬೀಸನಹಳ್ಳಿಯ ಸಕ್ರಾ ಆಸ್ಪತ್ರೆಯ ಮುಖ್ಯಸ್ಥ ದೀಪಕ್ ಬಲಾನಿ, ದೀಪ್ತಿ ಹಾಗೂ ದೀಪಕ್ ಅಗರೆಕಡ್ ಎಂಬುವರ ವಿರುದ್ಧ ಸರ್ಕಾರದ ಆದೇಶ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜು.29ರಂದು ಐಎಎಸ್ ಅಧಿಕಾರಿ ಉಮಾ ಮಹಾದೇವ್, ಐಪಿಎಸ್ ಸುನೀಲ್ ಅಗರ್​ವಾಲ್, ನೋಡಲ್ ಅಧಿಕಾರಿ ಚನ್ನಕೇಶವ ಅವರು ಪರಿಶೀಲನೆಗಾಗಿ ದೇವರಬೀಸನಹಳ್ಳಿಯಲ್ಲಿರುವ ಸಕ್ರಾ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಸರ್ಕಾರದ ಆದೇಶದಂತೆ ಕರೊನಾ ಸೋಂಕಿತರ ಚಿಕಿತ್ಸೆಗೆ ಶೇ. 50 ಬೆಡ್​ಗಳನ್ನು ಮೀಸಲಿರಿಸಲಾಗಿದೆ. ಜೂ.23ರಿಂದ ಜು.29ರವರೆಗಿನ ಅವಧಿಯಲ್ಲಿ ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ಬೆಡ್​ಗಳ ವಿವರ ಕೇಳಿದ್ದರು. ಈ ವೇಳೆ ಆಸ್ಪತ್ರೆಯ ಮುಖ್ಯಸ್ಥ ಮಾಹಿತಿ ನೀಡಲು ನಿರಾಕರಿಸಿ, ಸರ್ಕಾರಿ ಆದೇಶವನ್ನು ಉಲ್ಲಂಸಿದ್ದಾರೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಕೊಟ್ಟ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಭೀಕರ ಅಪಘಾತದಲ್ಲಿ ಕನ್ನಡದ ಕಿರುತೆರೆ ಜನಪ್ರಿಯ ನಟಿ `ಪವಿತ್ರ ಜಯರಾಂ’ ನಿಧನ!

Spread the love ಬೆಂಗಳೂರು : ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ