ಬೆಂಗಳೂರು: ಕೊರೊನಾ ಸೋಂಕು ತಗುಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಇವತ್ತು ಕೆಲವು ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಆಸ್ಪತ್ರೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದು ಈ ಮೂಲಕ ಕೊರೊನಾ ಸೋಂಕಿತರಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಕರ್ತವ್ಯನಿಷ್ಠೆ ಮೆರೆಯುವ ಮೂಲಕ ರಾಜ್ಯದ ಜನತೆಗೆ ಸಂದೇಶ ರವಾನಿಸಿದ್ದಾರೆ.
ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸಿಎಂ ಸರ್ಕಾರಿ ಕಚೇರಿ ಕೆಲಸ ಕಾರ್ಯಗಳಿಗೆ ಯಾವುದೇ ಅಡ್ಡಿಯಾಗದಂತೆ ಕೆಲಸ ಮಾಡಲು ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಸೂಚನೆ ನೀಡಿದ್ದಾರೆ. ಚಿಕಿತ್ಸೆ ಪಡೆದುಕೊಳ್ಳುತ್ತಲೇ ಮಹತ್ವದ ಕಡತಗಳ ಪರಿಶೀಲನೆ ನಡೆಸಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??