Breaking News

ಹುಟ್ಟಿ ಬೆಳೆದ ಮನೆ ಸುಟ್ಟು ಹಾಕಿದ್ದಕ್ಕೆ ಕಣ್ಣೀರಿಟ್ಟ ಅಖಂಡ ಶ್ರೀನಿವಾಸಮೂರ್ತಿ: ಸೂಕ್ತ ತನಿಖೆಗೆ ಆಗ್ರಹ

Spread the love

ಬೆಂಗಳೂರು: ತಾವು ಹುಟ್ಟಿಬೆಳೆದ ಮನೆಯನ್ನು ದುಷ್ಕರ್ಮಿಗಳು ಸುಟ್ಟುಹಾಕಿದ್ದಕ್ಕೆ ಕಣ್ಣೀರಿಟ್ಟಿರುವ ಪುಲಕೇಶಿನಗರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಸರ್ಕಾರ ಸಿಬಿಐ, ಸಿಐಡಿ ಯಾವುದಾದರೊಂದು ತನಿಖೆಯನ್ನು ಸೂಕ್ತವಾಗಿ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆಯಲು ಕಂದಾಯ ಸಚಿವ ಆರ್.ಅಶೋಕ್ ಅಖಂಡ ಶ್ರೀನಿವಾಸಮೂರ್ತಿ ನಿವಾಸಕ್ಕೆ ಭೇಟಿ ನೀಡಿದರು. ಭೇಟಿ ವೇಳೆ ತಮಗೂ ಕುಟುಂಬದ ಸದಸ್ಯರಿಗೆ ಸೂಕ್ತ ಕಾನೂನು ಭದ್ರತೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಖಂಡ ಶ್ರೀನಿವಾಸಮೂರ್ತಿ, ಕಳೆದ 25 ವರ್ಷಗಳಿಂದ ಇಂತಹ ಘಟನೆ ನಡೆದಿರಲಿಲ್ಲ. ತಂದೆತಾಯಿ ಸಹೋದರರ ಜೊತೆ ವಾಸವಾಗಿದ್ದ ಮನೆಯನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಹುಟ್ಟಿ ಬೆಳೆದ ಮನೆಯನ್ನು ಸುಟ್ಟುಹಾಕಿದ್ದಾರೆಂದು ಕಣ್ಣೀರಿಟ್ಟರು.

ಪ್ರಕರಣದ ಬಗ್ಗೆ ವಿವರಿಸಿದ ಅಖಂಡ ಶ್ರೀನಿವಾಸಮೂರ್ತಿ ನಮ್ಮ ಮನೆ ಮೇಲೆ ಸುಮಾರು ನಾಲ್ಕು ಸಾವಿರ ಜನ ದಾಳಿ ಮಾಡಿದ್ದಾರೆ. ಮಾರಕಾಸ್ತ್ರ ಪೆಟ್ರೋಲ್ ‌ಬಾಂಬ್ ಬಳಸಿ ಮನೆಗೆ ಬೆಂಕಿ ಹಚ್ಚುವ ಕೃತ್ಯ ಮಾಡಿದ್ದಾರೆ. ಘಟನೆಗೆ ಕಾರಣರಾದವರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಹೇಳಿದರು. ನವೀನ್ ನನ್ನ ಅಕ್ಕನ ಮಗ. ಅವನಿಗೂ ನಮಗೂ ಯಾವುದೇ ಸಂಪರ್ಕವಿಲ್ಲ. ಘಟನೆಯ ಹಿಂದೆ ಯಾರೇ ಇದ್ದರೂ ಶಿಕ್ಷೆಯಾಗಬೇಕು. ಮನೆಯಲ್ಲಿ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಸಚಿವ ಅಶೋಕ್ ಮನೆಗೆ ಬಂದು ನಮಗೆ ಧೈರ್ಯ ಹೇಳಿದ್ದಾರೆ. ಘಟನೆಯ ಹಿಂದೆ ಯಾರೇ ಇದ್ದರೂ ಸರ್ಕಾರ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಸೂಕ್ತ ಭದ್ರತೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಹೇಳಿದರು.


Spread the love

About Laxminews 24x7

Check Also

ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ಬೇಡ, ಬುಡ್ಗ ಜಂಗಮರಲ್ಲ: ಹೈಕೋರ್ಟ್​ ಸ್ಪಷ್ಟನೆ

Spread the love ಬೆಂಗಳೂರು: ವೀರಶೈವ ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ ಅಥವಾ ‘ಬುಡ್ಗ’ ಜಂಗಮರಲ್ಲ. ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ