ಬೆಂಗಳೂರು : ರಾಜ್ಯದಲ್ಲಿ ಮಳೆರಾಯ ತನ್ನ ಅಟ್ಟಹಾಸ ಮುಂದುವರೆಸಿದ್ದಾನೆ. ಹಲವೆಡೆ ಮಳೆರಾಯನ ಅವಾಂತರಕ್ಕೆ ಜನರು ಕಂಗಾಲಾಗಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಮುಂದುವರೆಯಲಿದೆ. ಹೀಗಾಗಿ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು ಭಾರಿ ಮಳೆಯಾಗಲಿದೆ.
ಹವಾಮಾನ ಇಲಾಖೆಯು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಇಂದು ಕೂಡ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಕಲಬುರಗಿ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 50 ಕಿ.
ಮೀ. ವೇಗದಲ್ಲಿ ವಾಯು ರಭಸವಾಗಿ ಮುನ್ನುಗ್ಗುತ್ತಿದೆ. 3.2 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆಗಷ್ಟ್ 21ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳು ತುಂಬಿ ಹರಿಯುತ್ತಿವೆ. ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಯ್ನಾ ಜಲಾಶಯದಿಂದ 55,958 ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??