Breaking News

ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ.

Spread the love

ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟದ ಅಂದಾಜು ಮಾಡಲಾಗಿದೆ.

ಇದುವರೆಗಿನ ಲೆಕ್ಕದ ಪ್ರಕಾರ 9 ಕೋಟಿ 50 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿದೆ. ಆಸ್ತಿ ಪಾಸ್ತಿ ನಷ್ಟ, ವಾಹನಗಳ ನಷ್ಟಗಳ ಬಗ್ಗೆ ಅಂದಾಜು ಹಾಕಲಾಗಿದೆ. ಸದ್ಯ ದಾಖಲಾಗಿರುವ ಎಫ್‌ಐಆರ್ ಗಳ ಅನ್ವಯ ಲೆಕ್ಕ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ನಷ್ಟದ ಅಂದಾಜು ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ.

ಬೆಂಗಳೂರಿನ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಈ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. ಸುಮಾರು 10 ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದ್ದು ನಷ್ಟದ ಮೊತ್ತ ಇನ್ನೂ ಹೆಚ್ಚಾಗಬಹುದು. ಗಲಭೆಯಲ್ಲಿ ಆಗಿರುವ ನಷ್ಟದ ವರದಿ ನೀಡಲು ಪ್ರತ್ಯೇಕ ತಂಡ ರಚಿಸಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಪಂಚಮಸಾಲಿ ಪೀಠದಲ್ಲಿ ಸಭೆ, ಸಮಾರಂಭ ಮಾಡದಂತೆ ಒಂದು ತಿಂಗಳ ಕಾಲ ನಿಷೇಧಾಜ್ಞೆ ಜಾರಿ

Spread the loveದಾವಣಗೆರೆ: ಹರಿಹರ ಪಂಚಮಸಾಲಿ ಪೀಠದಲ್ಲಿ  ದಿನ ಕಳೆದಂತೆ ಸ್ವಾಮೀಜಿ  ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ಜೋರಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ