Breaking News

ಕ್ಲೇಮ್‌ ಕಮಿಷನರ್‌: ಸರ್ಕಾರದ ಪರ ಎಸಿಎಸ್‌ ಅರ್ಜಿ

Spread the love

ಬೆಂಗಳೂರು: ಗಲಭೆ ವೇಳೆ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲು ‘ಕ್ಲೇಮ್‌ ಕಮಿಷನರ್’ ನೇಮಿಸುವಂತೆ ರಾಜ್ಯ ಸರ್ಕಾರದ ಪರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಜವಾಬ್ದಾರಿಯನ್ನು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ (ಎಸಿಎಸ್‌) ನೀಡಲಾಗಿದೆ.

ಈ ಸಂಬಂಧ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್ ನೇಮಿಸುವ ‘ಕ್ಲೇಮ್‌ ಕಮಿಷನರ್‌’ ಗಲಭೆ ವೇಳೆ ನಷ್ಟವಾದ ಆಸ್ತಿಯ ಮೌಲ್ಯ ಲೆಕ್ಕ ಹಾಕಿ, ಸಂತ್ರಸ್ತರಿಗೆ ಪರಿಹಾರ ಒದಗಿಸುವ ಬಗ್ಗೆ ನಿರ್ಧರಿಸಲಿದ್ದಾರೆ. ದಾವೆ ನಡೆಸುವ ಮತ್ತು ಅಫಿಡವಿಟ್‌ಗೆ ಸಹಿ ಹಾಕುವ ಅಧಿಕಾರವನ್ನು ಎಡಿಜಿಪಿಗೆ ನೀಡಲಾಗಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ