Breaking News

ಕರಾವಳಿ: ಇಂದು ಧಾರಾಕಾರ ಮಳೆ ಸಾಧ್ಯತೆ

Spread the love

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಸೆ.8ರಿಂದ 11ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3. ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಮಳೆ-ಎಲ್ಲಿ, ಎಷ್ಟು?: ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 24 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಾರ್ಕಳ 11, ಬೈಲಹೊಂಗಲ, ಸಾಗರ, ಶಿವಮೊಗ್ಗ 7, ಚಿಕ್ಕೋಡಿ, ನಿಪ್ಪಾಣಿ, ಕಮಲಾಪುರ, ಬೆಳಗಾವಿ, ಹುಕ್ಕೇರಿ, ಧಾರವಾಡ, ಹೊಳೆನರಸೀಪುರ 3, ಕಾರವಾರ, ಬೀದರ್, ದಾವಣಗೆರೆ, ತೀರ್ಥಹಳ್ಳಿ, ಮೂಡಿಗೆರೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ