ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ.
ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಸಂಬಂಧ ಕಂದಾಯ ಇಲಾಖೆ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರ ಘೋಷಿಸಿರುವ ಪ್ರವಾಹ ಪೀಡಿತ ತಾಲೂಕುಗಳು :
Laxmi News 24×7