Breaking News

ಕೋವಿಡ್ ಕಳವಳ- ಸೆ.15: 7576 ಹೊಸ ಪ್ರಕರಣ ; 7406 ಡಿಸ್ಚಾರ್ಜ್ ; 97 ಸಾವು

Spread the love

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7576 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7406 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 97 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 3,69,229 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಸನಿಹದಲ್ಲಿದೆ. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 98,536 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 7481 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ.

794 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3084 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (312), ಬಳ್ಳಾರಿ (54), ದಾವಣಗೆರೆ (405), ಹಾಸನ (291), ಶಿವಮೊಗ್ಗ (368), ಬೆಳಗಾವಿ (249), ದಕ್ಷಿಣ ಕನ್ನಡ (316), ರಾಯಚೂರು (160), ಧಾರವಾಡ (56), ಕಲಬುರಗಿ (144), ಚಿಕ್ಕಮಗಳೂರು (262), ಉಡುಪಿ (01), ಮಂಡ್ಯ (200), ಚಿತ್ರದುರ್ಗ (127), ಉತ್ತರ ಕನ್ನಡ (195), ಕೊಪ್ಪಳ (103), ತುಮಕೂರು (223), ವಿಜಯಪುರ (131), ಹಾವೇರಿ (180), ಗದಗ (39), ಬೆಂಗಳೂರು ಗ್ರಾಮಾಂತರ (143), ಚಿಕ್ಕಬಳ್ಳಾಪುರ (150), ಕೋಲಾರ (69), ರಾಮನಗರ (78), ಯಾದಗಿರಿ (76), ಬೀದರ್ (50), ಚಾಮರಾಜನಗರ (38) ಮತ್ತು ಕೊಡಗು (72) ಸೇರಿದಂತೆ ರಾಜ್ಯದ ಒಟ್ಟು 29 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 37,168 Rapid ಆಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 31,197 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 68,365 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 13,37,515 Rapid ಆಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 25,77,787 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 39,15,302 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ