Breaking News

ಬ್ರೇಕಪ್‌ ಸೇಡು: ಮಾಜಿ ಪ್ರಿಯತಮೆಯ ಖಾಸಗಿ ವಿಡಿಯೋ ಪೋರ್ನ್ ವೆಬ್‌ಸೈಟ್‌ಗೆ ಅಪ್‌ಲೋಡ್

Spread the love

ಬೆಂಗಳೂರು: ಪ್ರೀತಿಸಿ, ಲಿವಿಂಗ್ ಟುಗೆದರ್‌ನಲ್ಲಿದ್ದು ಬಳಿಕ ಬ್ರೇಕಪ್ ಮಾಡಿಕೊಂಡ ಯುವಕನೊಬ್ಬ, ಸೇಡು ತೀರಿಸಿಕೊಳ್ಳಲು ತನ್ನ ಮಾಜಿ ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನು ಪೋರ್ನ್ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಅಭ್ಯುದಯ್ ಪುರೋಹಿತ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ನೊಂದ ಸಂತ್ರಸ್ತ ಯುವತಿ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಂತ್ರಸ್ತ ಯುವತಿ ಮತ್ತು ಆರೋಪಿ ಅಭ್ಯುದಯ್ ಪುರೋಹಿತ್ 2023ರಿಂದ 2024ರವರೆಗೆ ಪರಸ್ಪರ ಪ್ರೀತಿಸಿ ಲಿವಿಂಗ್ ಟುಗೆದರ್ ನಡೆಸುತ್ತಿದ್ದರು. ಈ ಅವಧಿಯಲ್ಲಿ ಇಬ್ಬರೂ ಜೊತೆಯಾಗಿದ್ದ ಖಾಸಗಿ ಕ್ಷಣಗಳ ವಿಡಿಯೋಗಳನ್ನು (Video) ಆರೋಪಿ ಚಿತ್ರೀಕರಿಸಿಕೊಂಡಿದ್ದ.

ಬಳಿಕ ಇಬ್ಬರ ನಡುವೆ ವೈಮನಸ್ಸು ಉಂಟಾಗಿ ಬ್ರೇಕಪ್ ಮಾಡಿಕೊಂಡಿದ್ದರು. ಸಂಬಂಧ ಮುರಿದುಬಿದ್ದ ನಂತರ, ತಮ್ಮ ಖಾಸಗಿ ವಿಡಿಯೋಗಳನ್ನು ಡಿಲೀಟ್ ಮಾಡುವಂತೆ ಸಂತ್ರಸ್ತೆ ಅಭ್ಯುದಯ್‌ಗೆ ಮನವಿ ಮಾಡಿದ್ದರು. ಆ ಸಂದರ್ಭದಲ್ಲಿ ವಿಡಿಯೋ ಅಳಿಸಿ ಹಾಕುವುದಾಗಿ ಆರೋಪಿ ಒಪ್ಪಿಕೊಂಡಿದ್ದ.

ವಿಡಿಯೋಗಳನ್ನು ಡಿಲೀಟ್ ಮಾಡದ ಆರೋಪಿ ಅಭ್ಯುದಯ್, ಇತ್ತೀಚೆಗೆ ಆ ಖಾಸಗಿ ವಿಡಿಯೋಗಳನ್ನು ಪೋರ್ನ್ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಿದ್ದಾನೆ. ಈ ವಿಚಾರ ತಿಳಿದು ಆಘಾತಕ್ಕೊಳಗಾದ ಸಂತ್ರಸ್ತೆ, ವೆಬ್‌ಸೈಟ್‌ನ ಲಿಂಕ್ ಸಮೇತ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸಿಇಎನ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಪಾರ್ಕ್ ಜಾಗವನ್ನೇ ಸೈಟ್‌ ಮಾಡಿ ಖಾಸಗಿಯವರಿಗೆ ಖಾತೆ ಮಾಡಿದ್ದ ಪಿಡಿಒ ಸಸ್ಪೆಂಡ್‌!

Spread the loveಚಿಕ್ಕಬಳ್ಳಾಪುರ: ಪಾರ್ಕ್ ಹಾಗೂ ನಾಗರಿಕ ಸೌಲಭ್ಯಗಳಿಗಾಗಿ ಮೀಸಲಿಟ್ಟಿದ್ದ ಜಾಗದಲ್ಲಿ ಅಕ್ರಮವಾಗಿ ನಿವೇಶನಗಳನ್ನ  ಸೃಷ್ಟಿಸಿ, ಖಾಸಗಿ ವ್ಯಕ್ತಿಗಳ ಹೆಸರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ