Breaking News

ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್​ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.

Spread the love

ಬಳ್ಳಾರಿ: ಹಿರಿಯ ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಪೊಲೀಸ್​ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಹಂಪಿ Dy. SP ಎಸ್.ಎಸ್. ಕಾಶಿಗೌಡ ಅಧಿಕಾರಿಗಳ ಆಕ್ರೋಶಕ್ಕೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.

   DG&IGPಗೆ ರಾಜೀನಾಮೆ ಸಲ್ಲಿಸಿದ Dy.

SP ಕಾಶಿಗೌಡ IGP ನಂಜುಂಡಸ್ವಾಮಿ ರಾಜೀನಾಮೆ ನೀಡುವಂತೆ ಹೇಳಿದ ಹಿನ್ನೆಲೆ ರಾಜೀನಾಮೆ ನೀಡಿದ್ದೇನೆ ಎಂದು ಈ ಬಗ್ಗೆ ಪೊಲೀಸ್ WhatsApp ಗ್ರೂಪ್​ನಲ್ಲಿ ಬರೆದುಕೊಂಡಿದ್ದಾರೆ.

ಏನಿದು ರಾಜೀನಾಮೆ ಪ್ರಕರಣ?
ಹಂಪಿ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಇತ್ತೀಚೆಗೆ IGP ನಂಜುಂಡಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪವಾಗಿತ್ತು.

ಈ ವೇಳೆ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳದಿದ್ದಕ್ಕೆ ಕಾಶಿಗೌಡಗೆ ನಂಜುಂಡಸ್ವಾಮಿ ತರಾಟೆ ತೆಗೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಕೆಲಸ ಮಾಡದಿದ್ರೆ ಬೇರೆ ಕಡೆ ವರ್ಗಾವಣೆ ಮಾಡಿಕೊಂಡು ಹೋಗಿ ಇಲ್ಲವೇ ರಾಜೀನಾಮೆ ನೀಡಿ ಅಂತಾ IGP ನಂಜುಂಡಸ್ವಾಮಿ ತಮ್ಮ ಆಕ್ರೋಶ ಹೊರಹಾಕಿದ್ದರಂತೆ. ಅಧಿಕಾರಿಯ ಆಕ್ರೋಶಕ್ಕೆ ಬೇಸತ್ತು ಕಾಶಿಗೌಡ ರಾಜೀನಾಮೆ ನೀಡಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್ ಮಾಡ್ತಿದ್ದೀರಿ: DCP ಕೃಷ್ಣಕಾಂತ್ ಮಾರುತ್ತರ


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ