ಬೆಂಗಳೂರು: ಕೇಂದ್ರ ಸರ್ಕಾರ ಅನ್ಲಾಕ್ 5.0ಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದದೆ. ಈ ಅನುಸಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಜಿಲ್ಲೆಗಳಲ್ಲಿ ಇನ್ನೂ ಕೊರೊನಾ ರುದ್ರನರ್ತನ ನಿಂತಿಲ್ಲ. ಈ ನಡುವೆ ಮಕ್ಕಳನ್ನು ಶಾಲೆ ಕಳಿಸಲು ಪೋಷಕರಿಗೆ ಆತಂಕ ಉಂಟಾಗಿದೆ.
ಹಲವು ಜಿಲ್ಲೆಗಳಲ್ಲಿ ನಿತ್ಯ 200ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ಗಳು ಪತ್ತೆಯಾಗುತ್ತಿವೆ. ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ,ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನ ರುದ್ರನರ್ತನ ಹೆಚ್ಚಾಗಿದೆ.
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ.
ಈ ನಡುವೆ ಕೇಂದ್ರ ಸರ್ಕಾರ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಆದ್ರೆ ಜಿಲ್ಲೆಗಳಲ್ಲಿ ಕೊರೊನಾದಿಂದ ಪೊಷಕರಿಗೆ ಆತಂಕ ಹೆಚ್ಚಾಗಿದೆ. ನಿತ್ಯ 100 ರಿಂದ 200 ಪಾಸಿಟಿವ್ ಕೇಸ್ ಬರ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮ ಮಕ್ಕಳಿಗೆ ಶಾಲೆಗಳಿಗೆ ಕಳಿಸೋದು ಕಷ್ಟ ಎಂಬ ಅಭಿಪ್ರಾಯವೇ ವ್ಯಕ್ತವಾಗಿದೆ.