Breaking News

ಬ್ರೇಕಿಂಗ್ : ದೆಹಲಿಯಿಂದ ಬೆಂಗಳೂರಿಗೆ ಸಿಎಂ ಯಡಿಯೂರಪ್ಪ ವಾಪಾಸ್ : ಸದ್ಯದಲ್ಲೇ ಸಂಪುಟ ವಿಸ್ತರಣೆ.?

Spread the love

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಕೇಂದ್ರದ ಬಿಜೆಪಿ ವರಿಷ್ಠರ ಭೇಟಿಯ ಬಳಿಕ, ದೆಹಲಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತಾ ಎನ್ನುವ ಕುತೂಲಹ ಮೂಡಿಸಿದೆ.

BIG BREAKING : ಮುಂದಿನವಾರ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ

ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು ತೆರಳಿದ್ದಂತ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಇದೀಗ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಾಪಾಸ್ ಆಗಿರುವ ಸಿಎಂ ಅವರ ಆಗಮನದ ಹಿಂದೆ ಹಲವು ಕುತೂಲಹ ಮೂಡಿಸಿದೆ.

BREAKING : ಮಾಜಿ ಪರಿಷತ್ ಸದಸ್ಯ ‘ರಮೇಶ್ ಬಾಬು’ ಕಾಂಗ್ರೆಸ್ ಸೇರ್ಪಡೆ

ಕೇಂದ್ರ ನಾಯಕರು ಹೊಸಬರಿಗೆ ಸಚಿವ ಸ್ಥಾನ ನೀಡಲು ಸೂಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ರೆಬೆಲ್ ಶಾಸಕರಿಗೂ ಸಚಿವಸ್ಥಾನ ನೀಡುವ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಬೇಕು ಎನ್ನುವ ಬಗ್ಗೆಯೂ ಸಿಎಂ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸದ್ಯದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.

 


Spread the love

About Laxminews 24x7

Check Also

ಕಾಂಗ್ರೆಸ್ ಶಾಸಕ‌ ವಿರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ

Spread the loveರಾಯಚೂರು: ಕಾಂಗ್ರೆಸ್ ಶಾಸಕ‌ ವಿರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ