Breaking News

ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ದೇವೇಗೌಡ; ಕನ್ನಡದಲ್ಲಿ ಪ್ರಮಾಣ ಮೊದಲ ಬಾರಿ ಭಾನುವಾರವೂ ನಡೆಯುತ್ತಿರುವ ಅಧಿವೇಶನ

Spread the love

ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬೆಳಗ್ಗೆ ಸುಮಾರು 9 ಗಂಟೆಗೆ ರಾಜ್ಯಸಭೆ ಸಭಾಧ್ಯಕ್ಷ ವೆಂಕಯ್ಯನಾಯ್ಡು ಸಮ್ಮುಖದಲ್ಲಿ ಹೆಚ್.ಡಿ.ದೇವೇಗೌಡ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಇದೇ ಮೊದಲ ಬಾರಿಗೆ ಸಂಸತ್‍ನ ಮುಂಗಾರು ಅಧಿವೇಶನ ಭಾನುವಾರ ಕೂಡ ನಡೆಯುತ್ತಿರುವುದು ವಿಶೇಷ. ದೇವೇಗೌಡರು 24 ವರ್ಷಗಳ ಬಳಿಕ ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದಾರೆ. ಈ ಹಿಂದೆ ಪ್ರಧಾನ ಮಂತ್ರಿಯಾಗಿದ್ದ ವೇಳೆ ಅವರು ಮೇಲ್ಮನೆಗೆ ಆಯ್ಕೆಯಾಗಿದ್ದರು.

ರಾಜ್ಯಸಭೆಯಲ್ಲಿ ತೆರವಾದ ನಾಲ್ಕು ಸ್ಥಾನಗಳಿಗಾಗಿ ಜೂನ್ 12ರಂದು ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ದೇವೇಗೌಡರು ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ